HomeLatest Newsಮಕ್ಕಳಿಗೆ ಶಾಲಾ ಪಠ್ಯದಲ್ಲಿ ಆರೋಗ್ಯ, ಜೀವನಶೈಲಿ ಬಗ್ಗೆ ಮಾಹಿತಿ: ದಿನೇಶ್ ಗುಂಡೂರಾವ್

ಮಕ್ಕಳಿಗೆ ಶಾಲಾ ಪಠ್ಯದಲ್ಲಿ ಆರೋಗ್ಯ, ಜೀವನಶೈಲಿ ಬಗ್ಗೆ ಮಾಹಿತಿ: ದಿನೇಶ್ ಗುಂಡೂರಾವ್

ಬೆಂಗಳೂರು: ಶಾಲಾ ಪಠ್ಯಪುಸ್ತಕದಲ್ಲಿ ಶಿಕ್ಷಣದ ಜೊತೆಗೆ ಆರೋಗ್ಯದ ಅರಿವು ಮೂಡಿಸಲು ಗುಣಮಟ್ಟದ ಜೀವನ ಅನುಸರಣೆ ಆರೋಗ್ಯ ಬಗ್ಗೆ ಮಾಹಿತಿ ಸೇರ್ಪಡೆಗೆ ಚಿಂತನೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಏಮ್ಸ್ ರಿಷಿಕೇಶ್ ಮತ್ತು ಇಂಡಿಯನ್ ಪಾಲಿಸಿ ರಿಸರ್ಜ್ ಸಹಯೋಗದಲ್ಲಿ ಕರ್ನಾಟಕದಲ್ಲಿ ಅಧಿಕ ರಕ್ತದೊತ್ತಡ ಕುರಿತ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಶಿಕ್ಷಣದ ಜೊತೆಗೆ ಆರೋಗ್ಯದ ಅರಿವು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಪಠ್ಯಕ್ರಮದಲ್ಲಿ ಆಹಾರ, ಜೀವನ ಕ್ರಮ, ಶುಚಿತ್ವ, ಒಳ್ಳೆಯ ನಿದ್ದೆ ವ್ಯಾಯಾಮದ ಬಗ್ಗೆ ಪಠ್ಯ ಅಳವಡಿಸಲಾಗುವುದು. ಶಿಕ್ಷಣ ಇಲಾಖೆಯೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಶಾಲೆಗಳಲ್ಲಿಯೇ ಮಕ್ಕಳ ಆರೋಗ್ಯ ತಪಾಸಣೆ ಬಗ್ಗೆಯೂ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular