ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಉತ್ತೀರ್ಣತಾ ಪ್ರಮಾಣ ಪತ್ರಗಳನ್ನು ಪಡಯಲು ತಿಳಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ “http://kpsc.kar.nic.in” ನ “Departmental Examination 2024 I session” ಲಿಂಕ್ ಮುಖಾಂತರ ಡಿಜಿಲಾಕರ್ ಅಕೌಂಟ್‌ನೊಂದಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಿನಂತರ ಅಭ್ಯರ್ಥಿಯ ನೋಂದಣಿ ಸಂಖ್ಯೆ(7 ಅಂಕಿಗಳು) ಯನ್ನು Username ಆಗಿ ಮತ್ತು ಪಾನ್ ಕಾರ್ಡ್ ನಂಬರ್‌ನ್ನು ಪಾಸ್‌ವರ್ಡ್ ಆಗಿ ಉಪಯೋಗಿಸಿ ಪ್ರಮಾಣ ಪತ್ರಗಳನ್ನು ಲಾಗಿನ್ ಆದ 3 ರಿಂದ 4 ಗಂಟೆಗಳೊಳಗಾಗಿ ಪಡೆಯಬಹುದಾಗಿದೆ.

ಪ್ರಮಾಣ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಹಂತದಲ್ಲಿ ಯಾವುದಾದರೂ ತಾಂತ್ರಿಕ ದೋಷ ಉಂಟಾದಲ್ಲಿ ಸೇವಾಸಿಂಧು ಸಹಾಯವಾಣಿ ಸಂಖ್ಯೆಗಳು 080-22279954, 8792662814 ಮತ್ತು 8792662816 ಸಂಪರ್ಕಿಸಬಹುದು.

31.12.2024 20 ಮೇಲಿನ ವಿಧಾನವನ್ನು ಅನುಸರಿಸಿ ಉತ್ತೀರ್ಣತಾ ಪ್ರಮಾಣ ಪತ್ರಗಳನ್ನು Download ಮಾಡಿಕೊಳ್ಳಬಹುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಇಲಾಖಾ ಪರೀಕ್ಷಾ ಶಾಖೆ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read