BIG NEWS: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಐವರು ಅರೆಸ್ಟ್

ಕಾರವಾರ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಈವರೆಗೆ ಐವರ ಬಂಧನವಾಗಿದೆ ಎಂಬ ಮಾಹಿತಿ ಇದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎನ್ನುವ ಕುರಿತು ಹೆಚ್ಚಿನ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ಕದಂಬೋತ್ಸವಕ್ಕೆ ಚಾಲನೆ ನೀಡಲು ಬನವಾಸಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿ, ಎನ್ಐಎ, ಸಿಸಿಬಿ ಮತ್ತು ಪೊಲೀಸರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿದ್ದು, ಐವರ ಬಂಧನವಾಗಿದೆ ಎಂದು ತಿಳಿದು ಬಂದಿದೆ. ಸ್ಪೋಟಕ್ಕೆ ಸಂಬಂಧಿಸಿದಂತೆ ಕೆಲವು ಸುಳಿವು ಕೂಡ ಪತ್ತೆಯಾಗಿದ್ದು, ಯಾರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ನನಗೆ ಇಲ್ಲ ಎಂದು ಹೇಳಿದ್ದಾರೆ.

ಎನ್ಐಎ ಐವರನ್ನು ಬಂಧಿಸಿದೆ. ಯಾರು? ಏನೆಂದು ನನಗೆ ಮಾಹಿತಿ ಇಲ್ಲ. ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ ಎಂದು ಹೇಳಿದ ಸಿಎಂ, ಪಾಕಿಸ್ತಾನ ಪರ ಘೋಷಣೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಮಂಡ್ಯದಲ್ಲಿ ಅವರ ಪಕ್ಷದ ಕಾರ್ಯಕರ್ತ ಪಾಕ್ ಪರ ಘೋಷಣೆ ಕೂಗಿದರೂ ಕ್ರಮ ಕೈಗೊಂಡಿರಲಿಲ್ಲ. ಪಾಕಿಸ್ತಾನ ಜಿಂದಾಬಾದ್ ಎಂದು ಆತ ಕೂಗಿದ್ದರೂ ಏಕೆ ಬಂಧಿಸಲಿಲ್ಲ. ಪ್ರಕರಣವನ್ನು ಬಿಜೆಪಿಯವರು ಮುಚ್ಚಿ ಹಾಕಿದ್ದರು. ನಾವು ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ್ದೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read