ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಅ.20 ರಂದು ಬೃಹತ್ ಉದ್ಯೋಗ ಮೇಳ

ಮಡಿಕೇರಿ: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ “ಉದ್ಯೋಗ ಮೇಳ” ನಡೆಯಲಿದೆ.

ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್, ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಇ. ಸಂಸ್ಥೆಯ ಎಸ್ ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10, ಇಲ್ಲಿ ಅಕ್ಟೋಬರ್, 20 ರಂದು “ಉದ್ಯೋಗ ಮೇಳ” ನಡೆಯಲಿದೆ.

ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಂಕ್ಷಿಗಳು ಹಾಗೂ ಖಾಸಗಿ ಕಂಪನಿ/ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತರು ಬೃಹತ್ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು https://jobfair.calicut.nielit.in/  ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗಮೇಳಕ್ಕೆ ನೋಂದಾಯಿಸಿಕೊಳ್ಳುವಂತೆ ಕೊಡಗು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೋರಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read