HomeInternationalನೇಪಾಳ ಪ್ರವಾಹ: ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಸಿಇಒ ಲಕ್ಷ್ ಗೋಪಿಸೆಟ್ಟಿ ನಾಪತ್ತೆ

ನೇಪಾಳ ಪ್ರವಾಹ: ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಸಿಇಒ ಲಕ್ಷ್ ಗೋಪಿಸೆಟ್ಟಿ ನಾಪತ್ತೆ

ಬೆಂಗಳೂರು: ನೇಪಾಳ ಪ್ರವಾಸಕ್ಕೆ ತೆರಳಿದ್ದ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್‌ನ ಸಿಇಒ ಲಕ್ಷ್ ಗೋಪಿಸೆಟ್ಟಿ ನಾಪತ್ತೆಯಾಗಿದ್ದಾರೆ. ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದ ನಡುವೆ ಲಕ್ಷ್ ಗೋಪಿಸೆಟ್ಟಿ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ.

ವೈಯಕ್ತಿಕ ಪ್ರವಾಸದ ಹಿನ್ನೆಲೆಯಲ್ಲಿ ಲಕ್ಷ್ ಗೋಪಿಸೆಟ್ಟಿ ನೇಪಾಳಕ್ಕೆ ತೆರಳಿದ್ದರು. ಆದರೆ ಈಗ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಇನ್ಫೋಸಿಸ್ ಸಂಸ್ಥೆ ದೃಢಪಡಿಸಿದೆ. ನೇಪಾಳದಲ್ಲಿ ಪ್ರವಾಹ ಪರಿಸ್ಥಿತಿ ಬಳಿಕ ಈ ಘಟನೆ ನಡೀದಿರುವುದು ಆತಂಕಕ್ಕೆ ಕಾರಣವಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಕ್ಷ್ ಗೋಪಿಸೆಟ್ಟಿ ಅವರ ಸುರಕ್ಷತೆ ಮತ್ತು ಆರೋಗ್ಯದ ಬಗ್ಗೆ ಕಂಪನಿ ಕಳವಳ ವ್ಯಕ್ತಪಡಿಸಿದೆ. ಸಂಬಂಧಿತ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದ್ದು ಅವರ ಕುರಿತು ಮಾಹಿತಿ ಕಲೆಹಾಕಿ ಸಂಪರ್ಕ ಸಾಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದೆ. ಕುಟುಂಬದವರೊಂದಿಗೂ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲ ನೆರವನ್ನು ನೀಡಲಾಗುತ್ತಿದೆ ಎಂದು ಇನ್ಫೋಸಿಸ್ ತಿಳಿಸಿದೆ.

ಇನ್ನು ನೇಪಾಳದಲ್ಲಿ ಪ್ರವಾಹದ ಪ್ರಮಾಣ ಹೆಚ್ಚಾಗುತ್ತಿದ್ದಂತೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ವಿದೇಶಿ ನೆರವು ಸ್ವೀಕರಿಸಲು ಅಲ್ಲಿನ ಸರ್ಕಾರ ಒಪ್ಪಿಕೊಂಡಿದೆ. ಆರಂಭದಲ್ಲಿ ವಿದೇಶಿ ನೆರವನ್ನು ನಿರಾಕರಿಸಿದ್ದ ನೇಪಾಳ, ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ನೆರವು ಕೋರಿದೆ. ನೇಪಾಳದ ಮನವಿಗೆ ಭಾರತ ತಕ್ಷಣ ಸ್ಪಂದಿಸಿದ್ದು, ವಿಶೇಷ ಸುರಂಗ ರಕ್ಷಣಾ ತಂಡವನ್ನು ಕಳುಹಿಸಲು ಸಿದ್ಧತೆ ನಡೆಸಿದೆ. ಮೊದಲು ಸ್ಥಳ ಪರಿಶೀಲನೆಗಾಗಿ ತಂಡವನ್ನು ಕಳುಹಿಸಲಾಗುತ್ತಿದ್ದು, ನೆಲದ ಪರಿಸ್ಥಿತಿ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಉಪಕರಣಗಳ ಕುರಿತು ಮಾಹಿತಿ ಸಂಗ್ರಹಿಸಲಿದೆ.

ಪ್ರವಾಹದ ಹಿನ್ನೆಲೆಯಲ್ಲಿ ನೇಪಾಳದ ಜಲವಿದ್ಯುತ್ ಸುರಂಗದಲ್ಲಿ ಸುಮಾರು 1,000 ಕಾರ್ಮಿಕರು ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಅವರನ್ನು ಸುರಕ್ಷಿತವಾಗಿ ಹೊರತರಲು ಭಾರತದಿಂದ ವಿಶೇಷ ಸುರಂಗ ರಕ್ಷಣಾ ತಂಡದ ನೆರವು ಪಡೆಯಲಾಗುತ್ತಿದೆ.

ಇದರ ಜತೆಗೆ ಭಾರತ ವೈದ್ಯಕೀಯ ತಂಡವನ್ನೂ ನೇಪಾಳಕ್ಕೆ ಕಳುಹಿಸಲು ಮುಂದಾಗಿದೆ. ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸಂಪರ್ಕ ವ್ಯವಸ್ಥೆ ಪುನರ್‌ಸ್ಥಾಪಿಸಲು ಬೈಲಿ ಸೇತುವೆಗಳನ್ನು ಒದಗಿಸುವುದಾಗಿಯೂ ಭಾರತ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular