ಬೀದಿ ನಾಯಿ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5 ಸಾವಿರ, ಜೀವಹಾನಿಗೆ 5 ಲಕ್ಷ ಪರಿಹಾರ ನಿಯಮ ಜಾರಿಗೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5000 ರೂ. ಪರಿಹಾರ ನೀಡಲಾಗುವುದು. ಜೀವಹಾನಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಶೀಘ್ರವೇ ಈ ಬಗ್ಗೆ ನಿಯಮ ಜಾರಿಗೆ ತರಲಾಗುವುದು. ಈ ಸಂಬಂಧ ಚರ್ಚೆ ನಡೆಸಿದ್ದು ಅಂತಿಮ ನಿರ್ಧಾರ ಕೈಗೊಳ್ಳಲು ಕಾಲಾವಕಾಶ ನೀಡುವಂತೆ ಹೈಕೋರ್ಟ್ ಗೆ ಸರ್ಕಾರದಿಂದ ಪ್ರಮಾಣ ಪತ್ರ ಸಲ್ಲಿಸಲಾಗಿದೆ.

ಪ್ರಾಣಿಗಳ ಜನನ ನಿಯಂತ್ರಣ(ಶ್ವಾನ) ಅಧಿನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲ ಎಲ್. ರಮೇಶ್ ನಾಯಕ್ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆದಿದ್ದು, ಸರ್ಕಾರದ ಪರ ವಕೀಲರು ನಾಯಿ ದಾಳಿಯಿಂದ ಗಾಯಗೊಂಡವರಿಗೆ 5000 ರೂ., ಜೀವ ಕಳೆದುಕೊಂಡವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವ ಸಂಬಂಧ ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್ ನ್ಯಾಯಪೀಠ ನಾಲ್ಕು ವಾರಗಳಲ್ಲಿ ತೀರ್ಮಾನ ಕೈಗೊಳ್ಳಲು ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read