ಕಾಂಗ್ರೆಸ್ ವಿಜಯೋತ್ಸವದ ವೇಳೆ ಕಾಲು ಮುರಿದು ಪೊಲೀಸ್ ಗೆ ಗಂಭೀರ ಗಾಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಜಯಗಳಿಸಿದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಲಾಗಿದೆ.

ಚನ್ನಪಟ್ಟಣದಲ್ಲಿ ವಿಜಯೋತ್ಸವದ ಮೆರವಣಿಗೆ ವೇಳೆ ಹೆಡ್ ಕಾನ್ಸ್ ಟೆಬಲ್ ಒಬ್ಬರ ಕಾಲು ಹಾಗೂ ಕೈಗೆ ಗಾಯಗಳಾಗಿವೆ. ಚನ್ನಪಟ್ಟಣದ ಪುರ ಠಾಣೆಯ ಕಾನ್ಸ್ಟೇಬಲ್ ದುರ್ಗಪ್ಪ ಕೈ ಕಾಲು ಮುರಿತಕ್ಕೆ ಒಳಗಾಗಿದ್ದಾರೆ.

ಕಾಂಗ್ರೆಸ್ ವಿಜಯೋತ್ಸವ ಮೆರವಣಿಗೆ ಜನತಾ ಸಾಮಿಲ್ ಸಮೀಪ ಸಾಗುವ ಸಂದರ್ಭದಲ್ಲಿ ಅವರ ಕಾಲಿನ ಮೇಲೆ ವಾಹನ ಹರಿದು ಗಾಯವಾಗಿದೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read