ಬೆಂಗಳೂರು : ‘KPSC’ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ ಆಗಿದೆ ಎಂದು ಕರವೇ ಕಾರ್ಯಕರ್ತರು ಇಂದು ಕೆಪಿಎಸ್ ಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ ಆಗಿದೆ ಎಂದು ಕೆಪಿಎಸ್ ಸಿ ಕಚೇರಿಯ ಮುಂದೆ ಕರವೇ ತೀವ್ರ ಪ್ರತಿಭಟನೆ ನಡೆಸಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ನಡೆಸಿದೆ.
ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ ಡಿಸೆಂಬರ್ ನಲ್ಲಿ ನಡೆಸಿದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಪರೀಕ್ಷೆ ಫಲಿತಾಂಶ ತಡೆ ಹಿಡಿದು ಮರುಪರೀಕ್ಷೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು.ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ಅನುವಾದದಲ್ಲಿ ಸಮಸ್ಯೆಗಳಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಎದುರಿಸಿದ್ದರು. ಹೀಗಾಗಿ ಕನ್ನಡ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮರು ಪರೀಕ್ಷೆ ನಡೆಸುವಂತೆ ನಾವು ಸರ್ಕಾರಕ್ಕೆ ಮನವಿ ಮಾಡಿದ್ದೆವು. ಮರು ಪರೀಕ್ಷೆಯಲ್ಲಿಯೂ ಕೂಡ ತಪ್ಪುಗಳನ್ನು ಮಾಡಿದ್ದಾರೆ. ಅನುವಾದಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಂಡು ಬಂದಿವೆ ಎಂದು ಆರೋಪಿಸಿದ್ದಾರೆ.