HomeKarnatakaಮನೆ ಕಳ್ಳತನ ತಪ್ಪಿಸಲು ವಿನೂತನ ಕ್ರಮ: ಧಾರವಾಡ ಜಿಲ್ಲೆಯಲ್ಲಿ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿ 

ಮನೆ ಕಳ್ಳತನ ತಪ್ಪಿಸಲು ವಿನೂತನ ಕ್ರಮ: ಧಾರವಾಡ ಜಿಲ್ಲೆಯಲ್ಲಿ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿ 

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ರಾತ್ರಿ ಸಮಯದಲ್ಲಿ ನಡೆಯುವ ಕಳ್ಳತನ ಹಾಗೂ ಸ್ವತ್ತಿನ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಧಾರವಾಡ ಜಿಲ್ಲಾ ಪೊಲೀಸ್ ವತಿಯಿಂದ ಒಂದು ವಿನೂತನವಾದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (L.H.B.S) ನ್ನು ಕಲಘಟಗಿ, ಅಳ್ನಾವರ, ಕುಂದಗೋಳ ಪಟ್ಟಣ ಪಂಚಾಯತ ಹಾಗೂ ಅಣ್ಣಿಗೇರಿ ಮತ್ತು ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಜಾರಿಗೆ ತರಲಾಗುತ್ತಿದೆ.

ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಕುರಿತ ಮಾಹಿತಿವುಳ್ಳ ಬಿತ್ತಿಪತ್ರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಮ್ಮ ಕಚೇರಿಯಲ್ಲಿ ಇಂದು ಬಿಡುಗಡೆ ಮಾಡಿದರು.

ಸಾರ್ವಜನಿಕರು ಪ್ರವಾಸ, ಮದುವೆ, ದೇವಸ್ಥಾನ, ಜಾತ್ರೆಗಳು ಸೇರಿದಂತೆ ವಿವಿಧ ರೀತಿಯ ಇನ್ನೀತರ ಸಮಾರಂಭಗಳಿಗಾಗಿ ಬೇರೆ ಊರುಗಳಿಗೆ ತೆರಳುವಾಗ ಧಾರವಾಡ ಪೊಲೀಸ್ ಇಲಾಖೆ ಆರಂಭಿಸಿರುವ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (L.H.B.S) ಎಂಬ ವಿನೂತನವಾದ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಗೆ ಬೀಗ ಹಾಕಿ, ಮನೆ ಬಿಟ್ಟು ತೆರಳುವ ಸಂದರ್ಭದಲ್ಲಿ ತಮ್ಮ ಹೆಸರು, ವಿಳಾಸ, ಸಂಪರ್ಕ ಸಂಖ್ಯೆ ಹಾಗೂ ಗೂಗಲ್ ಲೊಕೇಶನ್ ಮಾಹಿತಿಯನ್ನು ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ – 8277968343 ಗೆ ಸಂದೇಶದ ಮೂಲಕ ಅಥವಾ ವಾಟ್ಸಾಪ್ ಕಳುಹಿಸುವ ಮೂಲಕ ಕಳ್ಳತನದಂತಹ ಪ್ರಕರಣಗಳನ್ನು ತಪ್ಪಿಸಲು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಿಳಿಸಿದ್ದಾರೆ.

ಧಾರವಾಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿಯ ಸಾರ್ವಜನಿಕರಿಗಾಗಿ ಜಾರಿಗೆ ತರಲಾದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular