HomeKarnataka1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್

ಯಾದಗಿರಿ: ಯಾದಗಿರಿ ಜಿಲ್ಲೆ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವೀರಣ್ಣ ದೊಡ್ಡಮನಿ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕ್ರಿಮಿನಲ್ ಪ್ರಕರಣ ವೊಂದರಲ್ಲಿ ಆರೋಪಿ ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ವೀರಣ್ಣ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಗುರುಮಠಕಲ್ ತಾಲೂಕಿನ ಗೋಪಾಲಪುರ ಗ್ರಾಮದ ಆನಂದ್ ಎಂಬುವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಅವರನ್ನು ಬಂಧಿಸದಿರಲು ಮತ್ತು ಇನ್ನೊಂದು ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಾಗಿ ಆನಂದ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಂದು ಲಕ್ಷ ರೂಪಾಯಿ ಹಣ ಪಡೆಯುವ ಸಂದರ್ಭದಲ್ಲಿ ದಾಳಿ ನಡೆಸಲಾಗಿದೆ. ಗುರುಮಠಕಲ್ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ವೀರಣ್ಣ ಒಂದು ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಜಾಕೀರ್ ನಮ್ಮದಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವೀರಣ್ಣ ದೊಡ್ಡಮನಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular