HomeKarnataka“ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ ವೀಡಿಯೋ ವೈರಲ್...

“ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ ವೀಡಿಯೋ ವೈರಲ್ |WATCH VIDEO

ಮೈಸೂರು: ಗಣೇಶೋತ್ಸವದ ಹಿನ್ನೆಲೆಯಲ್ಲಿ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆಯೊಂದು ಇದೀಗ ಚರ್ಚೆಗೆ ಕಾರಣವಾಗಿದೆ.

ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಯುವಕರ ಗುಂಪಿಗೆ ಮಾತನಾಡಿರುವ ಇನ್ಸ್‌ಪೆಕ್ಟರ್‌, “ನಾವು ಸೂಚಿಸುವ ಮಾರ್ಗದಲ್ಲೇ ಮೆರವಣಿಗೆ ಹೋಗಬೇಕು. ಮಸೀದಿ ಮುಂದೆ ಮೆರವಣಿಗೆ ಹೋಗುವಂತಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ .

ಮಸೀದಿ ಮುಂದೆ ಪಟಾಕಿ ಸಿಡಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ. ಅಲ್ಲದೆ, ಗಣೇಶ ಮೆರವಣಿಗೆಗೆ ನಿಗದಿಪಡಿಸುವ ಮಾರ್ಗದಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಸೂಚಿಸಿದ್ದಾರೆ. ಮಸೀದಿ ರಸ್ತೆಯಲ್ಲಿ ಗಣೇಶ ಮೆರವಣಿಗೆ ಹೋಗಬಾರದು. ಮಸೀದಿ ಮುಂದೆ ಪಟಾಕಿ ಹೊಡೆದರೆ ಗ್ರಹಚಾರ ಬಿಡಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಅಕಸ್ಮಾತ್ ಮಸೀದಿ ಮುಂದೆ ಮೆರವಣಿಗೆ ಹೋದರೆ ಹೇಳುವುದಿಲ್ಲ, ಮಾಡಿ ತೋರಿಸುತ್ತೇನೆ” ಎಂಬ ರೀತಿಯಲ್ಲಿ ಇನ್ಸ್‌ಪೆಕ್ಟರ್ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈ ಹೇಳಿಕೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸ್ ಅಧಿಕಾರಿಯ ಎಚ್ಚರಿಕೆ ಕುರಿತು ವಿವಿಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಶಾಂತಿ, ಸೌಹಾರ್ದತೆಯಿಂದ ಗೌರಿ-ಗಣೇಶ ಹಬ್ಬ ಆಚರಿಸಿ: ಎಸ್‍ಪಿ ಗುಂಜನ್ ಆರ್ಯ

 ಧಾರವಾಡ  :   ಗೌರಿ-ಗಣೇಶ ಹಬ್ಬವನ್ನು ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾಮರಸ್ಯದಿಂದ ಆಚರಿಸುವಂತೆ ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ಸೂಚಿಸಿದರು.

ಅವರು ನಗರದ ಪೊಲೀಸ್ ಹೆಡ್‍ಕ್ವಾಟರ್ಸದ ಶ್ರೀ ದುರ್ಗಾದೇವಿ ದೇವಸ್ಥಾನದ ಸಭಾಭವನದಲಿ ಗೌರಿ-ಗಣೇಶ ಹಬ್ಬದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಎಲ್ಲರೂ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಹಬ್ಬವನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ಆಚರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

 ಡಿ.ಜೆ. ಬಳಕೆಯಿಂದ ಉಂಟಾಗಬಹುದಾದ ಶಬ್ದ ಮಾಲಿನ್ಯ ಹಾಗೂ ಸಮಾಜದ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಅವರು ಸಭೆಯಲ್ಲಿ ಜಾಗೃತಿ ಮೂಡಿಸಿದರು. ಡಿ.ಜೆ. ಬದಲಾಗಿ ಸಾಂಪ್ರದಾಯಿಕ ವಾದ್ಯವೃಂದಗಳನ್ನು ಬಳಸಿಕೊಂಡು ಗಣೇಶೋತ್ಸವ ಆಚರಿಸುವಂತೆ ಅವರು ಸಲಹೆ ನೀಡಿದರು.

 ಸಭೆಯಲ್ಲಿ ಗ್ರಾಮೀಣ ಉಪವಿಭಾಗದ ಡಿ.ಎಸ್.ಪಿ ವಿನೋಧ ಮುಕ್ತೆದಾರ ಅವರು ಎಲ್ಲರನ್ನು ಸ್ವಾಗತಿಸಿದರು.ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಎಲ್ಲ ಸಮುದಾಯ ಮುಖಂಡರು, ಫ್ಲೆಕ್ಸ್ ಹಾಗೂ ಬ್ಯಾನರ್ ಮುದ್ರಣ ಅಂಗಡಿಗಳ ಮಾಲೀಕರು, ಡಿ.ಜೆ. ಸಿಸ್ಟಮ್ ಮಾಲೀಕರು, ಆರೋಗ್ಯ, ಲೋಕೋಪಯೋಗಿ, ಹೆಸ್ಕಾಂ, ಪರಿಸರ, ಅಬಕಾರಿ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲೆಯ ಪೆÇಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಗಣೇಶೋತ್ಸವ: ಅಬಕಾರಿ ಅಕ್ರಮಕ್ಕೆ ಅವಕಾಶ ನೀಡದಂತೆ ಸನ್ನದುದಾರರಿಗೆ ಎಚ್ಚರಿಕೆ

ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ಅಬಕಾರಿ ಅಕ್ರಮಗಳಿಗೆ ಅವಕಾಶ ನೀಡದಂತೆ ಜಿಲ್ಲೆಯ ಎಲ್ಲ ಮದ್ಯದ ಸನ್ನದುದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಜಿಲ್ಲೆಯ ಎಲ್ಲ ವಿಧದ ಮದ್ಯದ ಸನ್ನದುದಾರರ ಸಭೆ ನಡೆಸಿ, ಸನ್ನದು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಆದೇಶದಂತೆ ಒಣ ದಿನಗಳಲ್ಲಿ ಮದ್ಯದ ಅಂಗಡಿಗಳನ್ನು ತೆರೆದು ಮದ್ಯ ಮಾರಾಟ ಮಾಡುವುದು ಸಂಪೂರ್ಣವಾಗಿ ನಿಷಿದ್ಧವಾಗಿದೆ ಎಂದು ಎಚ್ಚರಿಸಿದರು.

ಅದೇ ರೀತಿ, ಲೈಸೆನ್ಸ್ ಇಲ್ಲದ ಸ್ಥಳಗಳಲ್ಲಿ ಮದ್ಯವನ್ನು ಸಂಗ್ರಹಿಸುವುದು ಅಥವಾ ಮಾರಾಟ ಮಾಡುವುದು ಕಂಡುಬಂದರೆ ಅಬಕಾರಿ ಕಾನೂನಿನಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗಣೇಶೋತ್ಸವದ ಸಂದರ್ಭದಲ್ಲಿ ಅಬಕಾರಿ ನಿಯಮಗಳ ಉಲ್ಲಂಘನೆಗೆ ಯಾವುದೇ ರೀತಿಯ ಅವಕಾಶ ನೀಡಬಾರದು. ಎಲ್ಲ ಸನ್ನದುದಾರರು ಸರ್ಕಾರದ ಆದೇಶ ಹಾಗೂ ಅಬಕಾರಿ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಬಕಾರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular