BIG NEWS: ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ ಚಿನ್ನ ಕದ್ದ ಆರೋಪ: ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ವಿರುದ್ಧ ದೂರು ದಾಖಲು

ಬೆಂಗಳೂರು: ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ ಚಿನ್ನವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದಲ್ಲಿ ಸೂರ್ಯನಗರ ಠಾಣೆ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳ ವಿರುದ್ಧವೇ ದೂರು ದಾಖಲಾಗಿರುವ ಘಟನೆ ನಡೆದಿದೆ.

ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ದೂರು ನೀಡಿದ್ದು, ದೂರು ಆಧರಿಸಿ ಇನ್ಸ್ ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ ಪಿ ನೇತೃತ್ವದಲ್ಲಿ ತನಿಖೆಗೆ ಸೂಚಿಸಲಾಗಿದೆ.

ಹತ್ತಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯತ ಸುಧಾಕರನ್ ಮತ್ತು ಗ್ಯಾಂಗ್ ನ್ನು ಸಂಜೀವ್ ಕುಮಾರ್ ಮಹಾಜನ್ ಬಂಧಿಸಿದ್ದರು. ಆರೋಪಿಗಳು ಕದ್ದಿದ್ದ ಸುಮಾರು 2 ಕೆಜಿ ಚಿನ್ನದ ಪೈಕಿ 200 ಗ್ರಾಂ ಚಿನ್ನವನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದ ಚಿನ್ನವನ್ನು ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಲೇ ಹಂಚಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read