BIG NEWS: ಮಾದಕ ವಸ್ತು ತಯಾರಿಕಾ ಘಟಕ ಪತ್ತೆ ಪ್ರಕರಣ: ಇನ್ಸ್ ಪೆಕ್ಟರ್ ಸಸ್ಪೆಂಡ್

ಮೈಸೂರು: ಮೈಸೂರು ನಗರದಲ್ಲಿ ಮಾದಕ ವಸ್ತು ತಯಾರಿಕಾ ಘಟಕ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಇನ್ಸ್ ಪೆಕ್ಟರ್ ಓರ್ವರನ್ನು ಅಮಾನತುಗೊಳಿಸಲಾಗಿದೆ.

ಮೈಸೂರಿನ ಎನ್.ಆರ್.ಠಾಣೆಯ ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತ್ ತಳವಾರ್ ಸಸ್ಪೆಂಡ್ ಆದವರು. ಠಾಣೆಯ ವ್ಯಾಪ್ತಿಯಲ್ಲಿ ಬನ್ನಿಮಂಟಪದ ರಿಂಗ್ ರಸ್ತೆಗೆ ಹೊಂದಿಕೊಂಡಿರುವಂತೆ ಇರುವ ಗ್ಯಾರೇಜ್ ನಲ್ಲಿ ಮಾದಕ ವಸ್ತು ತಯಾರಿಸಲಾಗುತ್ತಿತ್ತು. ಈ ಬಗ್ಗೆ ಇನ್ಸ್ ಪೆಕ್ಟರ್ ಗೆ ಮಾಹಿತಿಯಿಲ್ಲ ಎಂಬುದು ಕರ್ತವ್ಯಲೋಪ. ಈ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಲಕ್ಷ್ಮೀ ಕಾಂತ್ ಅವರನ್ನು ಅಮಾನತುಗೊಳಿಸಿ ಅವರ ಸ್ಥಳಕ್ಕೆ ಸಿಸಿಬಿಯ ಇನ್ಸ್ ಪೆಕ್ಟರ್ ಶಬ್ಬೀರ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ.

ಡ್ರಗ್ಸ್ ಪೆಡ್ಲರ್ ನೀಡಿದ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಈ ವೇಳೆ ಗ್ಯಾರೇಜ್ ನಲ್ಲಿ 10 ಕೆಜಿ ಎಂಡಿಎಂ ಮಾದಕ ವಸ್ತು, ದ್ರವರೂಪದಲ್ಲಿ ಸಂಸ್ಕರಣೆಯಾಗುತ್ತಿದ್ದ ವ್ಮಾದಕ ವಸ್ತುಗಳು ಸೇರಿ ಅಪಾರ ಪ್ರಮಾಣದ ಡ್ರಗ್ಸ್ ಪತ್ತೆಯಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read