HomeCrimeಹಾಸ್ಟೆಲ್ ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ; ದೂರು ದಾಖಲಾಗುತ್ತಿದ್ದಂತೆ ಪ್ರಾಂಶುಪಾಲ ಪರಾರಿ

ಹಾಸ್ಟೆಲ್ ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ; ದೂರು ದಾಖಲಾಗುತ್ತಿದ್ದಂತೆ ಪ್ರಾಂಶುಪಾಲ ಪರಾರಿ

ವಸತಿ ಶಾಲೆಯಲ್ಲಿದ್ದುಕೊಂಡು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಐಶ್ವರ್ಯ ತನ್ನ ಹಾಸ್ಟೆಲ್ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ವಿದ್ಯಾರ್ಥಿನಿಯಾಗಿದ್ದು, ಆಕೆ ಮೇಲೆ ಕಾಲೇಜಿನ ಪ್ರಾಂಶುಪಾಲ ರಮೇಶ್ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಮೇಶ್ ಆಗಾಗ ಐಶ್ವರ್ಯಗಳನ್ನು ತನ್ನ ರೂಮಿಗೆ ಕರೆಸಿಕೊಳ್ಳುತ್ತಿದ್ದ ಎನ್ನಲಾಗಿದ್ದು, ನಿರಂತರ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈಗ ರಮೇಶ್ ವಿರುದ್ಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ ಪರಾರಿಯಾಗಿದ್ದಾನೆ.

For Latest News Updates, Join Our Whatsapp Community🚩
RELATED ARTICLES

Most Popular