HomeLatest Newsವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಶಾಲೆಗಳಲ್ಲಿ ಫಲಕ ಅಳವಡಿಕೆ

ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಶಾಲೆಗಳಲ್ಲಿ ಫಲಕ ಅಳವಡಿಕೆ

ನವದೆಹಲಿ: ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿ.ಬಿ.ಎಸ್.ಇ) ಕ್ರಮ ಕೈಗೊಂಡಿದೆ.

ಅಧಿಕ ಕೊಬ್ಬಿನಾಂಶ ಸೇವನೆಯ ಕುರಿತು ಎಚ್ಚರಿಕೆ ಫಲಕಗಳನ್ನು ಸಿಬಿಎಸ್‌ಸಿ ಶಾಲೆಗಳಲ್ಲಿ ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಕರಿದ ತಿನಿಸುಗಳು ಸೇರಿದಂತೆ ಎಣ್ಣೆ ಪದಾರ್ಥಗಳ ಅಧಿಕ ಸೇವನೆಯಿಂದಾಗಿ ದೇಹದಲ್ಲಿ ಕೊಬ್ಬಿನಾಂಶ ಹೆಚ್ಚಾಗುತ್ತದೆ. ಜೊತೆಗೆ ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಹೃದ್ರೋಗ, ಬೊಜ್ಜಿನಂತಹ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅಧಿಕ ಖಾದ್ಯ ತೈಲ ಸೇವನೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಎಚ್ಚರಿಕೆ ಫಲಕಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ.

ಇತ್ತೀಚಿಗೆ ಸಿಬಿಎಸ್ಇ ಅಧೀನದ ಶಾಲೆಗಳಲ್ಲಿ ಸಕ್ಕರೆ ಸೇವನೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಎಚ್ಚರಿಕೆ ಫಲಕ ಅಳವಡಿಸಲು ತಿಳಿಸಲಾಗಿತ್ತು. ಮಕ್ಕಳಲ್ಲಿ ಮಧುಮೇಹ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶುಗರ್ ಬೋರ್ಡ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಾದ ನಂತರ ಅನಾರೋಗ್ಯಕರ ಕೊಬ್ಬು ಮತ್ತು ಎಣ್ಣೆ ಪದಾರ್ಥಗಳ ಬಗ್ಗೆ ಅರಿವು ಮೂಡಿಸಲು ಆಯಿಲ್ ಬೋರ್ಡ್ ಗಳನ್ನು ಅಳವಡಿಸುವಂತೆ ತಿಳಿಸಲಾಗಿದೆ. ಶಾಲೆ ಆವರಣದಲ್ಲಿ, ಮಕ್ಕಳು ಹೆಚ್ಚಾಗಿ ಓಡಾಡುವ ಸ್ಥಳಗಳು, ಸಭಾಂಗಣಗಳು, ಊಟ ಮಾಡುವ ಸ್ಥಳಗಳಲ್ಲಿ ಪೋಸ್ಟರ್ ಗಳು ಅಥವಾ ಡಿಜಿಟಲ್ ಡಿಸ್ ಪ್ಲೇ ಅಳವಡಿಸಿ ಖಾದ್ಯ ತೈಲದ ಅಪಾಯಗಳ ಬಗ್ಗೆ ಮಾಹಿತಿ, ಚಿತ್ರಗಳನ್ನು ಪ್ರದರ್ಶಿಸುವಂತೆ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular