HomeKarnatakaಬೆಂಗಳೂರಿನ ಪಿ.ಜಿಗಳಿಗೆ 'CCTV' ಅಳವಡಿಕೆ ಕಡ್ಡಾಯ ; ಕಮಿಷನರ್ ಬಿ.ದಯಾನಂದ್ ಖಡಕ್ ಸೂಚನೆ

ಬೆಂಗಳೂರಿನ ಪಿ.ಜಿಗಳಿಗೆ ‘CCTV’ ಅಳವಡಿಕೆ ಕಡ್ಡಾಯ ; ಕಮಿಷನರ್ ಬಿ.ದಯಾನಂದ್ ಖಡಕ್ ಸೂಚನೆ

ಬೆಂಗಳೂರು : ಬೆಂಗಳೂರಿನಲ್ಲಿ ಪಿ.ಜಿಗಳಿಗೆ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದೆ ಎಂದು ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ್ ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿರುವ ಪೇಯಿಂಗ್ ಗೆಸ್ಟ್ಗಳಲ್ಲಿ (ಪಿ.ಜಿ) ಸಿಸಿಟಿವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಪಿ.ಜಿಗಳಲ್ಲಿ ಭದ್ರತಾ ಸಿಬ್ಬಂದಿ ನೇಮಿಸಿಕೊಳ್ಳಬೇಕು. ಅಪರಿಚಿತರಿಗೆ ಪ್ರವೇಶ ನೀಡಬಾರದು.

ಪೊಲೀಸರು ತಮ್ಮ ವ್ಯಾಪ್ತಿಯಲ್ಲಿರುವ ಪಿ.ಜಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಅನಧಿಕೃತವೆಂದು ಕಂಡುಬಂದರೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಕ್ರಮ, ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ ಮಾಹಿತಿ ಕಲೆ ಹಾಕಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular