ಮಂಗಳೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಆದೇಶದ ಪ್ರಕಾರ ಜನವರಿ 1ರಿಂದ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗಿದೆ.
ಆಯೋಗದ ಆದೇಶದ ಪ್ರಕಾರ ಹೊಸದಾಗಿ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯವಾಗಿರುವುದರಿಂದ ಮೆಸ್ಕಾಂ ವ್ಯಾಪ್ತಿಯಲ್ಲಿ 2026ರ ಜನವರಿ 1ರಿಂದ ಹೊಸ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಗಳನ್ನು ಕಡ್ಡಾಯ ಮಾಡಲಾಗಿದೆ.
ಇದಕ್ಕೆ ಪ್ರತ್ಯೇಕವಾಗಿ ಹೆಚ್ಚು ಸ್ಥಳಾವಕಾಶ ಕಲ್ಪಿಸುವ ಅಗತ್ಯವಿಲ್ಲ. ಮತ್ತು ಈಗಾಗಲೇ ಸಂಪರ್ಕ ಪಡೆದುಕೊಂಡ ಗ್ರಾಹಕರಿಗೆ ಇದು ಅನ್ವಯವಾಗುವುದಿಲ್ಲ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
