ಮೈಸೂರು ನಗರದಲ್ಲಿ ಕನಕದಾಸರ ಪ್ರತಿಮೆ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಕುವೆಂಪು ಹೇಳುತ್ತಾರೆ ‘ಹುಟ್ಟುವಾಗ ಎಲ್ಲರೂ ವಿಶ್ವಮಾನವರು, ಬೆಳೆಯುತ್ತಾ ಬೆಳೆಯುತ್ತಾ ಜಾತಿ ಇತ್ಯಾದಿಗಳನ್ನು ರೂಢಿಸಿಕೊಂಡು ಅಲ್ಪಮಾನವರಾಗಿ ಬಿಡುತ್ತಾರೆ. ನಾವು ವಿಶ್ವಮಾನವರಾಗಲು ಪ್ರಯತ್ನಿಸೋಣ. ಅಲ್ಪ ಮಾನವರಾಗುವುದು ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಆಯೋಜಿಸಿದ್ದ ‘ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡಿದರು.

ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡೋಣ, ಇದು ಶಿಕ್ಷಣದ ಮೂಲ ಧ್ಯೇಯವು ಆಗಿದೆ. 1988ರಲ್ಲಿ 37 ವರ್ಷಗಳ ಹಿಂದೆ ನಾನು ಸಾರಿಗೆ ಮಂತ್ರಿಯಾಗಿದ್ದಾಗ ಕನಕದಾಸ ಜಯಂತಿಯ 500ನೇ ವರ್ಷಾಚರಣೆಯನ್ನು ಆಚರಿಸಲಾಯಿತು.ಕನಕದಾಸರು ಒಬ್ಬ ಕವಿ, ಸಂತ, ದಾರ್ಶನಿಕ. ಕನಕದಾಸರು ಹಿಂದುಳಿದ ಜಾತಿಗೆ ಸೇರಿದ್ದರಿಂದ ಅನೇಕ ಅಪಮಾನಗಳನ್ನು ಎದುರಿಸಬೇಕಾಯಿತು. ಅದನ್ನೆಲ್ಲಾ ಮೀರಿ ಅವರು ಸಂತರಾದ ಬಗೆ ಪ್ರತಿಯೊಬ್ಬರಿಗೂ ಆದರ್ಶ. ಕನಕದಾಸರ ಪ್ರತಿಮೆಯನ್ನು ಮೈಸೂರು ನಗರದಲ್ಲಿ ಸ್ಥಾಪಿಸಲಾಗುವುದು. ಈ ಮೂಲಕ ಅವರ ಜೀವನಾದರ್ಶ ಇನ್ನೂ ಹೆಚ್ಚು ಜನರನ್ನು ತಲುಪುವಂತಾಗಲಿ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read