HomeKarnatakaಟಿಬಿ ಡ್ಯಾಂ ಗೇಟ್ ಅಳವಡಿಕೆ: ಕಾರ್ಮಿಕರಿಗೆ ತಲಾ 50 ಸಾವಿರ ರೂ.: ಸಚಿವ ಜಮೀರ್ ಅಹ್ಮದ್

ಟಿಬಿ ಡ್ಯಾಂ ಗೇಟ್ ಅಳವಡಿಕೆ: ಕಾರ್ಮಿಕರಿಗೆ ತಲಾ 50 ಸಾವಿರ ರೂ.: ಸಚಿವ ಜಮೀರ್ ಅಹ್ಮದ್

ಹೊಸಪೇಟೆ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ಹೊಸ ಗೇಟ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ.

ಡ್ಯಾಂ ಗೇಟ್ ಅಳವಡಿಕೆ ಕಾರ್ಯ ವೀಕ್ಷಿಸಲು ಸ್ಥಳಕ್ಕೆ ತೆರಳಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಾರ್ಯನಿರತರಾಗಿದ್ದ ತಜ್ಞರು ಮತ್ತು ಕಾರ್ಮಿಕರೊಂದಿಗೆ ಚರ್ಚೆ ನಡೆಸಿದ್ದಾರೆ. ಡ್ಯಾಂ ತಜ್ಞ ಕನ್ನಯ್ಯನಾಯ್ಡು ಅವರ ತಂಡಕ್ಕೆ ಸಚಿವ ಜಮೀರ್ ಅಹ್ಮದ್ ಧೈರ್ಯ ತುಂಬಿದ್ದಾರೆ.

ಶುಕ್ರವಾರ ಗೇಟ್ ಅಳವಡಿಸಿ ಯಶಸ್ವಿಗೊಳಿಸಿ. ಪ್ರತೀ ಕಾರ್ಮಿಕರಿಗೆ ವೈಯಕ್ತಿಕವಾಗಿ 50 ಸಾವಿರ ರೂ. ಕೊಡುತ್ತೇನೆ. ಧೈರ್ಯವಾಗಿ ಕೆಲಸ ಮಾಡಿ ಎಂದು ಆತ್ಮವಿಶ್ವಾಸ ತುಂಬಿದ್ದಾರೆ. 19ನೇ ಗೇಟ್ ನಲ್ಲಿ ಹರಿದು ಹೋಗುತ್ತಿರುವ ಅಪಾರ ಪ್ರಮಾಣದ ನೀರು ತಡೆಗೆ ಸ್ಟಾಪ್ ಲಾಗ್ ಗೇಟ್ ಕೂರಿಸಲು ಪ್ರಯತ್ನ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular