ಎಸ್ಎಸ್ಎಲ್ಸಿ ಪರೀಕ್ಷೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿ ವಿತರಿಸಲು ಮುಖ್ಯ ಶಿಕ್ಷಕರಿಗೆ ಸೂಚನೆ

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಶಾಲಾ ಲಾಗಿನ್ ಮೂಲಕ ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸುವಂತೆ ತಿಳಿಸಲಾಗಿದೆ.

ನಿಗದಿಯಂತೆ ಮಾರ್ಚ್ 21ರಿಂದ ಏಪ್ರಿಲ್ 6 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದೆ. ಪ್ರವೇಶ ಪತ್ರಗಳಲ್ಲಿ ವಿದ್ಯಾರ್ಥಿಗಳ ಮಾಹಿತಿ ಸರಿ ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಯಾವುದೇ ವಿದ್ಯಾರ್ಥಿಯ ಮಾಹಿತಿ ತಪ್ಪಿದ್ದರೆ ಅಥವಾ ತಿದ್ದುಪಡಿಗಳು ಅಗತ್ಯವಿದ್ದರೆ ವಿದ್ಯಾರ್ಥಿಯ ಭಾವಚಿತ್ರ, ಸಹಿ ಮತ್ತು ಇತರೆ ತಿದ್ದುಪಡಿಗಳಲ್ಲಿ ಸೂಕ್ತ ದಾಖಲೆಗಳೊಂದಿಗೆ ಮಂಡಳಿಗೆ ಸಲ್ಲಿಸಿ ಸರಿಪಡಿಸಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಯ ಭಾವಚಿತ್ರ ಬದಲಾವಣೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಪೂರ್ವದಲ್ಲಿ ಮಾಡಲಾದ ಬದಲಾವಣೆಗಳನ್ನು ಮಾತ್ರ ಮಂಡಳಿ ಪರಿಗಣಿಸಲಿದ್ದು, ನಂತರದ ಬದಲಾವಣೆ ಮನವಿಗಳನ್ನು ಪುರಸ್ಕರಿಸುವುದಿಲ್ಲ. ಪ್ರವೇಶ ಪತ್ರದ ತಿದ್ದುಪಡಿಯ ಅವಶ್ಯಕತೆ ಇದ್ದಲ್ಲಿ ಸ್ಯಾಟ್ಸ್ ನಲ್ಲಿ ತಿದ್ದುಪಡಿ ಮಾಡಿದ ನಂತರ ದಾಖಲೆಗಳೊಂದಿಗೆ 100 ದಂಡ ಶುಲ್ಕ ಹಾಗೂ ಮಾಧ್ಯಮ ಬದಲಾವಣೆ ತಿದ್ದುಪಡಿಗೆ 500 ರೂ. ದಂಡ ಶುಲ್ಕವನ್ನು ಮಾರ್ಚ್ 16 ಸಂಜೆ 5 ಗಂಟೆ ಒಳಗೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read