HomeLatest Newsಪ್ರಾಥಮಿಕ, ಪ್ರೌಢಶಾಲೆಗಳಲ್ಲಿನ ನೇರ ನೇಮಕಾತಿ, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸೂಚನೆ

ಪ್ರಾಥಮಿಕ, ಪ್ರೌಢಶಾಲೆಗಳಲ್ಲಿನ ನೇರ ನೇಮಕಾತಿ, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸೂಚನೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಬಗ್ಗೆ ಕರ್ನಾಟಕ ರಾಜ್ಯ  ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗವು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದೆ.

ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಬಗ್ಗೆ ಕೋರಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 1978 ರಿಂದ 2003ರ ವರೆಗೆ ರಾಜ್ಯದ 04 ವಿಭಾಗೀಯ ಕಛೇರಿಗಳ ಸಹ ನಿರ್ದೇಶಕರುಗಳಿಗೆ ಹಾಗೂ 2003ನೇ ಸಾಲಿನಿಂದ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರುಗಳಿಗೆ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಮಾಹಿತಿಯನ್ನು ಆಯೋಗಕ್ಕೆ ಸಲ್ಲಿಸಲು ಉಲ್ಲೇಖ (3)(4)ರ ತಮ್ಮ ಪತ್ರಗಳಲ್ಲಿ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರಂತೆ ಶಿರಸಿ, ಉಡುಪಿ ರಾಮನಗರ & ಬೀದರ್ ಶೈಕ್ಷಣಿಕ ಜಿಲ್ಲೆಗಳು ಮಾಹಿತಿ ಸಲ್ಲಿಸಿರುತ್ತಾರೆ. ಉಳಿದಂತೆ ಯಾವ ಶೈಕ್ಷಣಿಕ ಜಿಲ್ಲೆಗಳು & 04 ವಿಭಾಗೀಯ ಕಛೇರಿಗಳು ಮಾಹಿತಿ ಸಲ್ಲಿಸಿರುವುದಿಲ್ಲ, ಈಗಾಗಲೇ 10 ತಿಂಗಳು ಗತಿಸಿರುತ್ತದೆ. ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿರುವುದರಿಂದ ಸಂಬಂಧಪಟ್ಟವರಿಗೆ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಅನುಬಂಧ-1 ರಲ್ಲಿ & ಮುಂಬಡ್ತಿ ಅನುಬಂಧ-2ರಲ್ಲಿ ಮಾಹಿತಿಯೊಂದಿಗೆ ವಿವರಿಸಲು ಅಧಿಕಾರಿ/ಸಿಬ್ಬಂದಿಯನ್ನು ಆಯೋಗಕ್ಕೆ ನಿಯೋಜಿಸುವಂತೆ ನಿರ್ದೇಶನ ನೀಡಲು ಕೋರಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular