HomeLatest Newsಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಪ್ರಮಾಣ ಪತ್ರ ಪಡೆಯಲು ಸೂಚನೆ

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಪ್ರಮಾಣ ಪತ್ರ ಪಡೆಯಲು ಸೂಚನೆ

ಚಿತ್ರದುರ್ಗ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಪ್ರಮಾಣ ಪತ್ರ ಪಡೆಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಈ ಹಿಂದೆ ಮ್ಯಾನುಯಲ್ ಆಗಿ ವಿತರಿಸಲಾಗುತ್ತಿದ್ದ ನೋಂದಣಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಿ ಆದೇಶಿಸಲಾಗಿದೆ.

ವಿದ್ಯುನ್ಮಾನ ನಾಗರಿಕ ಸೇವಾ ವಿತರಣ ನಿರ್ದೇಶನಾಲಯ ಈ ಆಡಳಿತ ಇಲಾಖೆಯ ಸೇವಾ ಸಿಂಧು ಯೋಜನೆಯಡಿ ನೋಂದಣಿ ಮಾಡಿಸಲು ಆನ್‍ಲೈನ್ ತಂತ್ರಾಂಶ ಅಭಿವೃದ್ದಿ ಪಡಿಸಿದ್ದು, ಈ ತಂತ್ರಾಂಶ ಬಳಸಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೋಂದಣಿ, ನವೀಕರಣ ಪ್ರಮಾಣ ಪತ್ರ ವಿತರಿಸಲಾಗುವುದು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಹಿರಿಯ ನಾಗರಿಕರ ವೃದ್ದಾಶ್ರಮಗಳನ್ನು ನಡೆಸುತ್ತಿರುವ ಎಲ್ಲಾ ಅನುದಾನಿತ/ಅನುದಾನರಹಿತ ಸ್ವಯಂ ಸೇವಾ ಸಂಸ್ಥೆಗಳು ಆನ್‍ಲೈನ್ ಮೂಲಕ https://sevasindhu.karnataka.gov.in ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣೆ ಪ್ರಮಾಣ ಪತ್ರ ಪಡೆಯಬೇಕೆಂದು ಈ ಮೂಲಕ ಕೋರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ. ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ:08194-235284 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular