HomeKarnatakaಶಾಲಾ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೆ ಸೂಚನೆ

ಶಾಲಾ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೆ ಸೂಚನೆ

ಬೆಂಗಳೂರು: ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ಚುನಾವಣಾ ಕರ್ತವ್ಯಗಳಿಗೆ ಆದ್ಯತೆ ಮೇರೆಗೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿ ಹಾಗೂ ಶಿಕ್ಷಕೇತರ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲಾ ಶಿಕ್ಷಕರನ್ನು ಚುನಾವಣಾ ಸಂಬಂಧಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಗಳಿಗೆ ಹಾಗೂ ಬೂತ್ ಮಟ್ಟದ ಅಧಿಕಾರಿಗಳಾಗಿ(BLOs) ನಿಯೋಜನೆ ಮಾಡಲಾಗುತ್ತಿದ್ದು, ಇದರಿಂದಾಗಿ ಶಾಲೆಗಳಲ್ಲಿ ಪಠ್ಯಕ್ರಮಗಳು ಸಮಯಕ್ಕೆ ಸರಿಯಾಗಿ ಆಗದೇ ಶಾಲೆಗಳಲ್ಲಿ ಮಕ್ಕಳ ಪ್ರಗತಿ ಕುಂಠಿತವಾಗುತ್ತಿರುವುದಾಗಿ ಹಾಗೂ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿರುವುದಾಗಿ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮನವಿ ಮಾಡಿರುತ್ತಾರೆ. (ಮುಖ್ಯ ಚುನಾವಣಾಧಿಕಾರಿಗಳ ಪತ್ರ ಲಗತ್ತಿಸಿದೆ.)

ಅಲ್ಲದೆ, ಸಿವಿಲ್ ಅಪೀಲ್ ಸಂಖ್ಯೆ 5659/2007ರಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ದಿನಾಂಕ:06.12.2007ರಂದು ನೀಡಿರುವ ಆದೇಶಲ್ಲಿ ಸಾಮಾನ್ಯವಾಗಿ ರಜಾ ದಿನಗಳು, ಬೋಧಕೇತರ ದಿನಗಳು ಹಾಗೂ ಬೋಧಕೇತರ ಅವಧಿಯಲ್ಲಿ ಶಾಲಾ ಶಿಕ್ಷಕರ ಸೇವೆಯನ್ನು ಬಳಸಿ ಕೊಳ್ಳುವಂತೆ ಹಾಗೂ ಶಿಕ್ಷಕೇತರ ಸಿಬ್ಬಂದಿಗಳನ್ನು ಯಾವುದೇ ಸಂದರ್ಭದಲ್ಲಿಯಾದರೂ ಚುನಾವಣಾ ಕರ್ತವ್ಯಗಳಿಗೆ ನಿಯೋಜಿಸು ವಂತೆ ಸೂಚನೆ ನೀಡಲಾಗಿದೆ. ಅದರಂತೆ, ಹೆಚ್.ಆ‌ರ್.ಎಂ.ಎಸ್.ನಿಂದ 4/1 ಪಡೆದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಅಧಿಕಾರಿ/ ನೌಕರರ ವಿವರನ್ನು ಇದರೊಂದಿಗೆ ಲಗತ್ತಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಲಿನ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ಚುನಾವಣಾ ಕರ್ತವ್ಯಗಳಿಗೆ ಆದ್ಯತೆ ಮೇರೆಗೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿ ಹಾಗೂ ಶಿಕ್ಷಕೇತರ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular