ಸಚಿವ ಪ್ರಿಯಾಂಕ್ ಖರ್ಗೆ ನಿಂದಿಸುವುದು, ಟ್ರೋಲ್ ಮಾಡುವುದು ಖಂಡನೀಯ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದಿಸುವುದು, ಟ್ರೋಲ್ ಮಾಡುವುದು ಖಂಡನೀಯ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದರು.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಚಿವರು ಸಂಪುಟ ಸಹೋದ್ಯೋಗಿ , ಮಿತ್ರ ಪ್ರಿಯಾಂಕ್ ಖರ್ಗೆಯವರನ್ನು ನಿಂದಿಸುವುದು ಮತ್ತು ಅವರ ಕುಟುಂಬಸ್ಥರ ಮೇಲೆ ಅಸಭ್ಯವಾಗಿ ದಾಳಿ ನಡೆಸುತ್ತಿರುವುದು ಖಂಡನೀಯ , ಅವರ ಜೊತೆಗೆ ನಾವೆಲ್ಲೂರು ಇದ್ದೇವೆ ಸಂವಿದಾನ ವಿರೋಧಿ ಚಟುವಟಿಕೆಗಳನ್ನು ನಡೆಸುವ , ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ದ್ವೇಷದ ವಿಷ ಬೀಜ ಬಿತ್ತುವ ಯಾವುದೇ ಸಂಘಟನೆಗಳಿಗೆ ಸರ್ಕಾರಿ ಜಾಗ ಬಳಸಿಕೊಳ್ಳಲು ಅವಕಾಶ ಇರಬಾರದು. ಬಿಜೆಪಿ ಪರಿವಾರದವರು ಸಾರ್ವಜನಿಕ ವಾಗ್ವದದ ಮಟ್ಟವನ್ನು ಬಹಳ ಕೀಳುಮಟ್ಟಕ್ಕೆ ಇಳಿಸಿದ್ದಾರೆ. ಅದರ ಭಾಗವಾಗಿಯೇ @PriyankKharge ಯವರನ್ನು ಫೋನಿನ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಕೊಡುವುದು, ನಿಂದಿಸುವುದು ಹಾಗೂ ಟ್ರೊಲ್ ಮಾಡುವುದು ಸಭ್ಯತೆಯಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read