
ಪ್ರೊ.ಭಗವಾನ್ ಹೇಳಿಕೆಗೆ ಜೆಡಿಎಸ್ ನಾಯಕ ಜಿ.ಟಿ ದೇವೇಗೌಡ ಕಿಡಿಕಾರಿದ್ದು, ಪ್ರೊ.ಭಗವಾನ್ ಅರೆಹುಚ್ಚ ಎಂದು ವಾಗ್ಧಾಳಿ ನಡೆಸಿದ್ದಾರೆ.ಮಾಜಿ ಸಚಿವ, ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ ಅವರು ಪ್ರೊ.ಭಗವಾನ್ ಅವರನ್ನು ಹುಚ್ಚ ಎಂದು ಕರೆದಿದ್ದಾರೆ.”ಪ್ರೊಫೆಸರ್ ಭಗವಾನ್ ಅರ್ಧ ಹುಚ್ಚರಾಗಿದ್ದಾರೆ ಮತ್ತು ಅವರು ತಮ್ಮ ಮಾನಸಿಕ ಸ್ಥಿರತೆಯನ್ನು ಕಳೆದುಕೊಂಡಿದ್ದಾರೆ. ಇಂತಹ ಹೇಳಿಕೆ ನೀಡುವ ಮೂಲಕ ಅವರು ತಮ್ಮನ್ನು ತಾವು ಅವಮಾನಿಸಿಕೊಂಡಿದ್ದಾರೆ. ಯಾರನ್ನೋ ಮೆಚ್ಚಿಸಲು ಭಗವಾನ್ ಇಂತಹ ಮಾತುಗಳನ್ನು ಆಡುತ್ತಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕು’ ಎಂದು ಜಿಟಿ ದೇವೇಗೌಡ ಹೇಳಿದರು.

