HomeKarnatakaವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಗಜಪಡೆಗೆ 1.87 ಕೋಟಿ ರೂ. ವಿಮೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಗಜಪಡೆಗೆ 1.87 ಕೋಟಿ ರೂ. ವಿಮೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

ಮೈಸೂರು ದಸರಾ ಮಹೋತ್ಸವದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆ, ಮಾವುತರು, ಕಾವಾಡಿಗಳ ಜೊತೆಗೆ ಅರಣ್ಯಾಧಿಕಾರಿಗಳಿಗೆ 1.87 ಕೋಟಿ ರೂ. ಮೌಲ್ಯದ ವಿಮೆ ಸೌಲಭ್ಯ ಕಲ್ಪಿಸಲಾಗಿದೆ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿಗೆ, ಸಾರ್ವಜನಿಕರಿಗೂ ಪ್ರತ್ಯೇಕವಾಗಿ 50 ಲಕ್ಷ ರೂಪಾಯಿ ಕಡಿಮೆ ಸೌಲಭ್ಯವಿದೆ.

ಗಜಪಡೆಯ ತಾಲೀಮು, ಮೆರವಣಿಗೆ ಸಂದರ್ಭದಲ್ಲಿ ಅನಾಹುತದಿಂದ ಗಾಯಗೊಂಡಲ್ಲಿ, ಸಾರ್ವಜನಿಕರಿಗೆ ಹಾನಿಯಾದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತದಿಂದ ವಿಮೆ ಮಾಡಿಸಲಾಗುತ್ತದೆ. ಆಗಸ್ಟ್ 21ರಂದು ಮೈಸೂರಿಗೆ ಗಜಪಡೆ ಆಗಮಿಸಲಿದ್ದು, ದಸರಾ ಮಹೋತ್ಸವ ಮುಗಿದು ವಾಪಸ್ ಹೋಗುವವರೆಗೂ ವಿಮೆ ಸೌಲಭ್ಯ ಚಾಲ್ತಿಯಲ್ಲಿರುತ್ತದೆ. ಒಟ್ಟಾರೆ 2,37,50,000 ರೂ.ಗೆ ವಿಮೆ ಮಾಡಿಸಿದ್ದು, ಅರಣ್ಯ ಇಲಾಖೆ ವತಿಯಿಂದ ಪ್ರೀಮಿಯಂ ಪಾವತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular