HomeLatest Newsಡ್ರೋನ್ ಮೂಲಕ ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಎಚ್ಚರಿಕೆ ನೀಡಿದ ಗುಪ್ತಚರ ಇಲಾಖೆ: ಜಮ್ಮು-ಕಾಶ್ಮೀರ, ಪಂಜಾಬ್, ರಾಜಸ್ಥಾನ...

ಡ್ರೋನ್ ಮೂಲಕ ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಎಚ್ಚರಿಕೆ ನೀಡಿದ ಗುಪ್ತಚರ ಇಲಾಖೆ: ಜಮ್ಮು-ಕಾಶ್ಮೀರ, ಪಂಜಾಬ್, ರಾಜಸ್ಥಾನ ಗಡಿಯಲ್ಲಿ ಹೈ ಅಲರ್ಟ್

ನವದೆಹಲಿ: ಗಣರಾಜ್ಯೋತ್ಸವಕ್ಕೆ ಎರಡು ದಿನಗಳು ಮಾತ್ರ ಬಾಕಿ ಇದೆ. ಎಲ್ಲೆಡೆ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ನಡುವೆ ದೇಶದ ಗಡಿ ಭಾಗಗಳಲ್ಲಿ ಕಟ್ಟೆಚ್ಚವಹಿಸುವಂತೆ ಗುಪ್ತಚರ ಇಲಾಖೆ ಸೂಚನೆ ನೀಡಿದೆ. ಜಮ್ಮು-ಕಾಶ್ಮೀರ, ರಾಜಸ್ಥಾನ ಗಡಿ ಭಾಗಗಳಲ್ಲಿ ಕೆಲ ದಿನಗಳ ಹಿಂದೆ ಪಾಕಿಸ್ತಾನ ಡ್ರೋನ್ ಗಳು ಹಾರಾಟ ನಡೆಸಿದ್ದ ಹಿನ್ನೆಲೆಯಲ್ಲಿ ಅಲರ್ಟ್ ಆಗಿದ್ದ ಸೇನೆಗೆ ಇದೀಗ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ.

ಪಂಜಾಬ್, ರಾಜಸ್ಥಾನ, ಜಮ್ಮು-ಕಾಶ್ಮೀರದ ಗಡಿ ಪ್ರದೇಶಗಳಲ್ಲಿ ಡ್ರೋನ್, ಪ್ಯಾರಾಗ್ಲೈಡರ್ ಹಾಗೂ ಹ್ಯಾಂಗ್ ಗ್ಲೈಡರ್ ಮೂಲಕ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಭಯೋತ್ಪಾದಕರು ಡ್ರೋನ್ ಗಳ ಮೂಲಕವಾಗಿ ಶಸ್ತ್ರಾಸ್ತ್ರಗಳನ್ನು ಹಾಗೂ ಸ್ಫೋಟಕಗಳನ್ನು ಭಾರತಕ್ಕೆ ಅಕ್ರಮವಾಗಿ ತರುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ಗಡಿ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಷ್ಕರ್-ಇ-ತೊಯ್ಬಾ ಹಾಗೂ ಸಿಖ್ ಉಗ್ರಗಾಮಿ ಸಂಘಟನೆಗಳು ಇತ್ತೀಚೆಗೆ ಪ್ಯಾರಾಗ್ಲೈಡಿಂಗ್ ಸಲಕರಣೆಗಳನ್ನು ಸಂಗ್ರಹಿಸಿರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಉಗ್ರರು ಏರ್ ರೂಟ್ ಗಳ ಮೂಲಕವಾಗಿ ಒಳನುಸುಳುವ ಯತ್ನ ನಡೆಸಬಹುದು. ಈ ನಿಟ್ಟಿನಲ್ಲಿ ಭದ್ರತಾಪಡೆಗಳು ಹೆಚ್ಚಿನ ನಿಗಾ ವಹಿಸುವಂತೆ ಆದೇಶಿಸಲಾಗಿದೆ. ಏರಿಯಲ್ ಸರ್ವೆಲೆನ್ಸ್ ಹೆಚ್ಚಿಸಲಾಗಿದ್ದು, ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular