ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಈಶಾನ್ಯ ಮಾನ್ಸೂನ್ ಚುರುಕಾಗಿದ್ದು, ಕೆಲವು ಕಡೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಇನ್ನು ಮೂರು ದಿನ ಮಳೆಯ ಅರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 27ರಿಂದ 29 ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಗೆ ಮೊದಲ ಎರಡು ದಿನ ಆರೆಂಜ್ ಅಲರ್ಟ್ ನೀಡಲಾಗಿದ್ದು, ಕೊನೆಯ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಜಿಲ್ಲೆಗೆ ಅಕ್ಟೋಬರ್ 27 ಮತ್ತು 29ರಂದು ಯೆಲ್ಲೋ ಅಲರ್ಟ್, ಒಂದು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಅಕ್ಟೋಬರ್ 28 ರಂದು ಮಾತ್ರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಮೂರು ದಿನ ಸಾಧಾರಣ ಮಳೆ ಆಗಲಿದೆ. ಅಕ್ಟೋಬರ್ 28 ರಂದು ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
