GOOD NEWS : ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ : ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ : ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ, ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಇದೇ ವೇಳೆ ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂದಿದ್ದಾರೆ.
ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು, ಮಾರುಕಟ್ಟೆಯಿಂದ ಹೆಚ್ಚಿನ ಹಣವನ್ನು ಸಂಗ್ರಹಿಸಲು ಖಾಸಗಿ ವಲಯಕ್ಕೆ ಸರ್ಕಾರ ಅವಕಾಶ ನೀಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read