HomeBusinessಸುಕನ್ಯಾ ಸಮೃದ್ಧಿ ಯೋಜನೆ ಸೇರಿ ಸಣ್ಣ ಉಳಿತಾಯ ಯೋಜನೆ ಖಾತೆದಾರರಿಗೆ ಮುಖ್ಯ ಮಾಹಿತಿ: ಬಡ್ಡಿದರ ಯಥಾಸ್ಥಿತಿ...

ಸುಕನ್ಯಾ ಸಮೃದ್ಧಿ ಯೋಜನೆ ಸೇರಿ ಸಣ್ಣ ಉಳಿತಾಯ ಯೋಜನೆ ಖಾತೆದಾರರಿಗೆ ಮುಖ್ಯ ಮಾಹಿತಿ: ಬಡ್ಡಿದರ ಯಥಾಸ್ಥಿತಿ ಮುಂದುವರಿಕೆ

ನವದೆಹಲಿ: ಕಿಸಾನ್ ವಿಕಾಸ ಪತ್ರ, ನಿಶ್ಚಿತ ಅವಧಿ ಠೇವಣಿ, ಮಾಸಿಕ ಆದಾಯ ಯೋಜನೆ ಸೇರಿದಂತೆ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಬದಲಾಗದೆ ಉಳಿದಿದೆ.

2024- 25 ನೇ ಸಾಲಿನ ಏಪ್ರಿಲ್ 1ರಂದು ಆರಂಭವಾಗುವ ಏಪ್ರಿಲ್ -ಜೂನ್ ತ್ರೈಮಾಸಿಕದಲ್ಲಿ ಬಡ್ಡಿ ದರ ಬದಲಾಗದೆ ಈಗಿನಂತೆ ಮುಂದುವರೆಯಲಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ. ಹಣಕಾಸು ಸಚಿವಾಲಯದ ಅಧಿಸೂಚನೆಯ ಪ್ರಕಾರ, 2023 -24ನೇ ಆರ್ಥಿಕ ವರ್ಷದ ಕೊನೆಯ ತ್ರೈಮಾಸಿಕಕ್ಕೆ ಪ್ರಕಟಿಸಲಾದ ಬಡ್ಡಿ ದರವೇ ಮುಂದುವರೆಯಲಿದೆ. ಇದರಿಂದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳಲ್ಲಿ ಹೆಚ್ಚಳವನ್ನು ನಿರೀಕ್ಷಿಸುತ್ತಿರುವವರಿಗೆ ಬೇಸರ ತಂದಿದೆ.

ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ(NSC), ಹಿರಿಯ ನಾಗರಿಕರ ಉಳಿತಾಯ ಯೋಜನೆ(SCSS) ಮತ್ತು ಸಾರ್ವಜನಿಕ ಭವಿಷ್ಯ ನಿಧಿ(PPF) ನಂತಹ ಪ್ರಮುಖ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರಗಳು ಕ್ರಮವಾಗಿ 7.7%, 8.2% ಮತ್ತು 7.1% ನಲ್ಲಿ ಬದಲಾಗದೆ ಉಳಿದಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3 ವರ್ಷಗಳ ಸಮಯದ ಠೇವಣಿ ಮತ್ತು ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯ ಬಡ್ಡಿ ದರ ಕ್ರಮವಾಗಿ 7.1% ಮತ್ತು  8.2% ರಷ್ಟು ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular