ʻಕೃಷಿ ಸಾಲದ ಬಡ್ಡಿ ಮನ್ನಾʼ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು :  ರೈತರ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ- ಕೃಷಿಯೇತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಸಹಕಾರಿ ಸಂಸ್ಥೆಗಳ ಮೂಲಕ ಸಾಲ ಪಡೆದು 2023ರ ಡಿಸೆಂಬರ್‌ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದ್ದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ಘೋಷಣೆ ಮಾಡಿದ್ದರು. ಅದರಂತೆ ಇದೀಗ, ರೈತರ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ- ಕೃಷಿಯೇತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಷರತ್ತುಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ:

  • ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ.
  • ನಿಗದಿತ ಸಹಕಾರ ಸಂಘಗಳಲ್ಲದೇ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಯೋಜನೆ ಅನ್ವಯಿಸದು.
  • ನಬಾರ್ಡ್ ಗುರುತಿಸಿದ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶು ಸಂಗೋಪನೆ, ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್, ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯ.
  • ರಾಜ್ಯ ಸರ್ಕಾರದ ಬಡ್ಡಿ ರಿಯಾಯಿತಿ ಬದ್ಧತೆಯಡಿ ವಿತರಿಸಿರುವ ಕೃಷಿ/ ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅನ್ವಯ.
  • ಮಾರಟೊರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಅನ್ವಯ.
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read