HomeKarnatakaBIG NEWS: ಜಾತಿ ಗಣತಿ ವರದಿ ಬಹಿರಂಗ ಮಾಡದಂತೆ ಹೈಕೋರ್ಟ್ ಗೆ ಅರ್ಜಿ: ಸಮೀಕ್ಷೆ ನಡೆಸಲು...

BIG NEWS: ಜಾತಿ ಗಣತಿ ವರದಿ ಬಹಿರಂಗ ಮಾಡದಂತೆ ಹೈಕೋರ್ಟ್ ಗೆ ಅರ್ಜಿ: ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ, ವರದಿ ಕಾನೂನುಬಾಹಿರವೆಂದು ಘೋಷಿಸಲು ಮನವಿ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ದಪಡಿಸಿದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ(ಜಾತಿ ಗಣತಿ) ವರದಿಯನ್ನು ಬಹಿರಂಗ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಕೆಯಾದ ಮಧ್ಯಂತರ ಮನವಿ ಕುರಿತ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ನಡೆಸಲಿದೆ.

2021 ರಲ್ಲಿ ಡಾ. ಮುಖ್ಯಮಂತ್ರಿ ಚಂದ್ರು ಅವರು ಜಾತಿ ಗಣತಿ ವರದಿ ಬಹಿರಂಗಗೊಳಿಸಬೇಕು ಎಂದು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೋರಿ ಹಾಸನದ ಹೊಳೆನರಸೀಪುರದ ವಕೀಲ ಓ.ಕೆ. ರಘು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಗುರುವಾರ ರಘು ಅವರ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಎನ್.ವಿ. ಆಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ.ಜೆ. ಶಿವಶಂಕರೇಗೌಡ ಅವರಿದ್ದ ವಿಭಾಗಿಯ ಪೀಠದ ಮುಂದೆ ಹಾಜರಾಗಿ ಜಾತಿ ಸಮೀಕ್ಷೆ ಮಾಡಲು ಆಯೋಗಕ್ಕೆ ಅಧಿಕಾರವೇ ಇಲ್ಲ. ಆಯೋಗದ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರ ಅಧಿಕಾರವಧಿ ಗುರುವಾರ ಮುಕ್ತಾಯವಾಗಲಿದ್ದು, ತರಾತುರಿಯಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಆಯೋಗದ ಹಿಂದಿನ ಅಧ್ಯಕ್ಷರು ಸಿದ್ದಪಡಿಸಿದ ವರದಿಯನ್ನು ಹಾಲಿ ಅಧ್ಯಕ್ಷರು ಸಲ್ಲಿಸುತ್ತಿದ್ದಾರೆ. ವರದಿ ಬಹಿರಂಗವಾಗಲು ಅವಕಾಶ ನೀಡದಂತೆ ನಿರ್ಬಂಧಿಸಬೇಕು. ಈ ಕುರಿತು ಮನವಿ ಮಾಡಿ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಕೋರಿದ್ದಾರೆ. ವರದಿ ಬಹಿರಂಗ ಮಾಡಲು ಅವಕಾಶ ನೀಡದಂತೆ ನಿರ್ಬಂಧಿಸಬೇಕು ಎಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೈಕ್ಷಣಿಕ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲವಾಗಿದೆ. ಕೇಂದ್ರ ಸರ್ಕಾರ ಮಾತ್ರವೇ ಅಂತಹ ಅಧಿಕಾರ ಹೊಂದಿದ್ದು, ವರದಿಯನ್ನು ಕಾನೂನು ಬಾಹಿರವೆಂದು ಘೋಷಿಸಬೇಕು. ವರದಿ ಅನುಸಾರ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಮಾಜ ಸಂಪರ್ಕ ವೇದಿಕೆ ಹೈಕೋರ್ಟ್ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದು, ಅದು ವಿಚಾರಣೆಗೆ ಬರಬೇಕಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular