‘International Book of Records’ ಗೆ ಸೇರ್ಪಡೆಯಾದ ರಾಜ್ಯ ಸರ್ಕಾರದ ಶಕ್ತಿ ಯೋಜನೆ : CN ಸಿದ್ದರಾಮಯ್ಯ ಸಂತಸ.!

ಬೆಂಗಳೂರು : ರಾಜ್ಯ ಸರ್ಕಾರದ ಶಕ್ತಿ ಯೋಜನೆ  International Book of Records ಗೆ ಸೇರ್ಪಡೆಯಾಗಿದ್ದು,  ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ  ಸಮಸ್ತ ಕನ್ನಡಿಗರು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಶಕ್ತಿʼಯು International Book of Records – World Record of Excellence ಗೆ ಸೇರ್ಪಡೆಗೊಂಡು, ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ, ಜೂನ್‌ 11, 2023 ರಿಂದ ಜುಲೈ 25, 2025ರ ಅವಧಿಯಲ್ಲಿ ಸಾರಿಗೆ ನಿಗಮದ ಬಸ್ಸುಗಳಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಸಾಧನೆಗಾಗಿ ಶಕ್ತಿ ಯೋಜನೆಯು ಈಗಾಗಲೇ ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿದೆ. ಇದೀಗ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ವಿಶ್ವ ದಾಖಲೆ ಬರೆದಿದೆ. ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡಿದ್ದು, ಇದರಿಂದ ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ. ಸ್ತ್ರೀ ಸಬಲೀಕರಣದ ಮಹತ್ವದ ಹೆಜ್ಜೆಯಲ್ಲಿ ನಮ್ಮೊಂದಿಗೆ ಜೊತೆಯಾಗಿರುವ ಎಲ್ಲಾ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆಯ ಸಾಧನೆಯ ಶ್ರೇಯ ಸಲ್ಲುತ್ತದೆ. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ,ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read