
ತನ್ನ ರೂಂ ನಲ್ಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗಳು ಹೊರಗೆ ಬಾರದ ಹಿನ್ನೆಲೆ ರೂಮ್ ಗೆ ಹೋಗಿ ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತಂದೆ ಹಾಗೂ ತಮ್ಮ ಮನೆಯಲ್ಲಿದ್ದಾಗಲೇ ಧನಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ .

