ಬೆಂಗಳೂರು : ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಭಾಪತಿಗಳಾದ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಸರವಣ, ಚಲನಚಿತ್ರ ನಟರಾದ ಅನಿರುದ್ಧ್, ಸಾನ್ಯ ಅಯ್ಯರ್, ಶೈನ್ ಶೆಟ್ಟಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯಲ್ಲಿ ಯೋಗ ಪಟುಗಳು ಭಾಗವಹಿಸಿದ್ದರು.

