HomeKarnatakaInternational Yoga Day : ದೇಹ ಮತ್ತು ಮನಸ್ಸುಗಳ ವ್ಯವಸ್ಥಿತ ನಿರ್ವಹಣೆಗೆ ಯೋಗ ಸಹಕಾರಿ :...

International Yoga Day : ದೇಹ ಮತ್ತು ಮನಸ್ಸುಗಳ ವ್ಯವಸ್ಥಿತ ನಿರ್ವಹಣೆಗೆ ಯೋಗ ಸಹಕಾರಿ : ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

ಶಿವಮೊಗ್ಗ : ದೇಹ ಮತ್ತು ಮನಸ್ಸನ್ನು ಆರೋಗ್ಯವಾಗಿಟ್ಟುಕೊಂಡಾಗ ದಿನನಿತ್ಯದ ಕೆಲಸ-ಕಾರ್ಯಗಳನ್ನು ನಿರೀಕ್ಷೆಯಂತೆ ನಿರ್ವಹಿಸಲು, ಸದಾ ಲವಲವಿಕೆಯಿಂದಿರಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಯೋಗಭ್ಯಾಸವನ್ನು ನಿಯಮಿತವಾಗಿ ರೂಢಿಸಿಕೊಳ್ಳುವುದು ಎಂದು ಶ್ರೇಯಸ್ಕರ ಎಂದು ಜಿಲ್ಲಾಧಿಕಾರಿ ಡಾ ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು

ದಶಕದಿಂದೀಚೆಗೆ ಯೋಗದ ಮಹತ್ವದ ಜನರಿಗೆ ಅರಿವಾಗಿದ್ದು, ಹೆಚ್ಚಿನ ಜನ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದು, ಯೋಗಾಭ್ಯಾಸದ ಕಡೆಗೆ ಒಲವು ಹೊಂದಿದ್ದಾರೆ. ಸರ್ಕಾರ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಾರ್ವಜನಿಕರಲ್ಲಿ ಯೋಗದ ಕುರಿತು ಅರಿವು ಮೂಡಿಸುವಲ್ಲಿ ಸಕ್ರಿಯವಾಗಿವೆ. ಅಲ್ಲದೇ ನಗರದ ಹಲವೆಡೆ ಯೋಗ ತರಬೇತಿ ಕೇಂದ್ರಗಳು ಮಾರ್ಗದರ್ಶನ ನೀಡುತ್ತಿದ್ದು, ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ಪ್ರಮುಖಪಾತ್ರ ವಹಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದವರು ನುಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವ್ಯಾಯಾಮದ ಮೂಲಕ ಶರೀರದ ಮಾಂಸ ಖಂಡಗಳನ್ನು ಪುಷ್ಟಿಗೊಳಿಸಿ ಶರೀರಕ್ಕೆ ಗಂಭೀರ ನೋಡ ಕೊಡಿಸಬಹುದು. ಆದರೆ, ಯೋಗಾಸನದ ಮೂಲಕ ಶರೀರ, ಮನಸ್ಸು ಮತ್ತು ನರ-ನಾಡಿಗಳನ್ನು ಸದಾ ಕ್ರಿಯಾಶೀಲವಾಗಿಡುವಲ್ಲಿ ಸಹಕಾರಿಯಾಗಿದೆ. ಮಾತ್ರವಲ್ಲ ದೇಹದಲ್ಲಿ ಮೆದುಳು, ಹೃದಯ, ಶ್ವಾಸಕೋಶ, ಪಿತ್ತಕೋಶ, ಕಿಡ್ನಿ ಮುಂತಾದವುಗಳು ಪರಿಪೂರ್ಣವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಯೋಗಾಭ್ಯಾಸ ಉತ್ತಮವಾದುದಾಗಿದೆ ಎಂದವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿವಯೋಗ ಯೋಗ ಕೇಂದ್ರದ ತರಬೇತುದಾರ ಗೋಪಾಲಕೃಷ್ಣ ಅವರು ಸರಳ, ಸುಲಭ ಹಾಗೂ ಎಲ್ಲರೂ ಕಲಿಯಬಹುದಾದ ಯೋಗಾಸನ ಮತ್ತು ಪ್ರಾಣಾಯಾಮಗಳ ಕುರಿತು ಮಾಹಿತಿಯುಕ್ತ ಪ್ರಾತ್ಯಕ್ಷಿತೆ ಮತ್ತು ತರಬೇತಿ ನೀಡಿದರು. ಇದೇ ಸಂದರ್ಭದಲ್ಲಿ ಸಿದ್ಧಯೋಗ ಧ್ಯಾನ ಕೇಂದ್ರದ ಚಂದ್ರಶೇಖರ್ ಅವರು ಧ್ಯಾನ, ಅದರ ಮಹತ್ವ ಹಾಗೂ ಅನುಸರಣಾ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಮತ್ತಿತರರಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular