BIG NEWS: ಮಸೀದಿ ಸಮೀಕ್ಷೆ ವೇಳೆ ಹಿಂಸಾಚಾರ: 4 ಜನರು ಸಾವು; ಶಾಲಾ-ಕಾಲೇಜುಗಳು ಬಂದ್; ಇಂಟರ್ನೆಟ್ ಸ್ಥಗಿತ

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಮಸೀದಿ ಸಮೀಕ್ಷೆಯ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಸಂಭಾಲ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸರ್ವೆಗೆ ನ್ಯಾಯಾಲಯ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ವೆಗೆ ಮುಂದಾಗಿದ್ದ ವೇಳೆ ಉದ್ರಿಕ್ತರು ಕಲ್ಲುತೂರಾಟ ನಡೆಸಿದ್ದರು. ಸ್ಥಳೀಯರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿತ್ತು. ಇದರಿಂದಾಗಿ ಸಾಂಭಾಲ್ ನಲ್ಲಿ ಸಂಪೂರ್ಣ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಶಾಲೆಗಳನ್ನು ಮುಚ್ಚಲಾಗಿದೆ.

ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯನ್ನು ಹಿಂದೂ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ವಿವಾದಾ ಕಾನೂನು ಹೋರಾಟದ ಕೇಂದ್ರವಾಗಿದೆ.

ಭಾನುವಾರ ಮಸೀದಿ ಸಮೀಕ್ಷೆಗೆ ಬಂದಿದ್ದ ವೇಳೆ ಪ್ರತಿಭಟನಾಕಾರರು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪದಿಸಿದ್ದಾರೆ. ಪೊಲೀಸರ ಮೇಲೆ ಕಲ್ಲು ಎಸೆದಿದ್ದಾರೆ. ಈ ವೇಳೆ ಗುಂಪು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಲಾಠಿಗಳನ್ನು ಬಳಸಿದರು.

ಹಿಂಸಾಚಾರ ಭುಗಿಲೆದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸುಮಾರು 20 ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ಗಲಭೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ 21 ಜನರನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ.

ಸಂಭಾಲ್ ತಹಸಿಲ್‌ನಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಜಿಲ್ಲಾಡಳಿತವು 12 ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ನವೆಂಬರ್ 25 ರಂದು ರಜೆ ಘೋಷಿಸಿದೆ.

ನವೆಂಬರ್ 30 ರವರೆಗೆ ಯಾವುದೇ ಹೊರಗಿನವರು, ಸಾಮಾಜಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಪ್ರತಿನಿಧಿಗಳು ಅಧಿಕಾರಿಗಳ ಆದೇಶವಿಲ್ಲದೆ ಸಂಭಾಲ್‌ಗೆ ಪ್ರವೇಶಿಸುವುದನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read