HomeKarnatakaಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್ಷಿಪ್ ಯೋಜನೆ : ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್ಷಿಪ್ ಯೋಜನೆ : ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.

ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು.

ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್ ಮಾಡಿ [email protected] ಗೆ ಇ-ಮೇಲ್ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular