HomeKarnatakaJOB ALERT : ಫೆ.28 ರಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ

JOB ALERT : ಫೆ.28 ರಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದ್ದು, ಫೆ.28 ರ ಬೆಳಿಗ್ಗೆ 10 ಗಂಟೆಗೆ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದೆ.

ಪಶುವೈದ್ಯಕೀಯ ಔಷಧ ಹಾಗೂ ವಿಷ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ(ಕುಕ್ಕುಟಶಾ ಶಾಸ್ತ್ರಆಹಾರ ಶಾಸ್ತ್ರ / ಜಾನುವಾರು ನಿರ್ವಹಣೆ), ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಹಾಗೂ ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ರಾಷ್ಟಿçÃಯ ಅರ್ಹತಾ ಪರೀಕ್ಷೆ(ಎನ್ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700 ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನವನ್ನು ಪಾವತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-200872 ಹಾಗೂ ವಿಶ್ವವಿದ್ಯಾಲಯಯ ಜಾಲತಾಣ www.kvafsu.edu.in ಗೆ ಸಂಪರ್ಕಿಸಬಹುದು ಎಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular