HomeKarnatakaಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ನೌಕರರ ವಜಾ

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ನೌಕರರ ವಜಾ

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪಾಂಡವಪುರದ ಉಪ ವಿಭಾಗೀಯ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ಇಬ್ಬರು ನೌಕರರನ್ನು ವಜಾಗೊಳಿಸಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೆ. ಮೋಹನ್ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಆರೋಪಿ ಅಶ್ವಿನಿ ಮತ್ತು ಆಕೆಯ ಪತಿ ಆಂಬುಲೆನ್ಸ್ ಚಾಲಕ ಆನಂದ್ ವಜಾಗೊಂಡವರು. ಇಬ್ಬರೂ ವಿಚಾರಣೆಯ ವೇಳೆ ಕೃತ್ಯದಲ್ಲಿ ಭಾಗಿಯಾದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಆರೋಗ್ಯ ಇಲಾಖೆ ವಸತಿಗೃಹದಲ್ಲೇ ಆರೋಪಿಗಳು ಭ್ರೂಣ ಹತ್ಯೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿರುದ್ಧ ಪಾಂಡವಪುರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಪೊಲೀಸ್ ಇಲಾಖೆಯಿಂದ ಉಳಿದ ಆರೋಪಿಗಳ ಪತ್ತೆಗಾಗಿ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ತನಿಖೆ ತೀವ್ರಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular