ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ: ಮಹತ್ವದ ದಾಖಲೆಗಳ ಜಪ್ತಿ

ಬೆಂಗಳೂರು: ಅವ್ಯವಹಾರ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿ ಟವರ್ ನಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರ ಕಚೇರಿ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳ ಜಪ್ತಿ ಮಾಡಿದ್ದಾರೆ. ಕಡತಗಳಲ್ಲಿರುವ ವಿಷಯಗಳ ಬಗ್ಗೆ ಯಾವುದೇ ಪ್ರಕ್ರಿಯೆ ನಡೆಸಿದಂತೆ ಸೂಚನೆ ನೀಡಿದ್ದಾರೆ.

ಶಿಕ್ಷಣ ಇಲಾಖೆಯ 15ಕ್ಕೂ ಹೆಚ್ಚು ಅಧಿಕಾರಿಗಳು ಇಲಾಖೆಯ ಲೆಕ್ಕಪರಿಶೋಧಕರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರ ಕರ್ತವ್ಯಲೋಪ, ಹಣ ದುರ್ಬಳಕೆ, ಅವ್ಯವಹಾರಗಳ ಬಗ್ಗೆ ಉನ್ನತ ಮಟ್ಟದ ಸಮಿತಿ ರಚಿಸಿ ವಿವರ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿದೆ.

ವಿಧಾನಪರಿಷತ್ ಸದಸ್ಯ ಅಡಗೂರು ಹೆಚ್. ವಿಶ್ವನಾಥ್ ಅವರು ಗ್ರಂಥಾಲಯ ಇಲಾಖೆಗೆ ಸೆಸ್ ರೂಪದಲ್ಲಿ ಸಂಗ್ರಹವಾದ ಕೋಟ್ಯಂತರ ರೂಪಾಯಿ ಹಣವನ್ನು ಪುಸ್ತಕ ಖರೀದಿಗೆ ಬಳಸದೆ ಡಿಜಿಟಲ್ ಗ್ರಂಥಾಲಯ ಹೆಸರಲ್ಲಿ ಪೋಲು ಮಾಡಲಾಗಿದೆ. ಈ ಬಗ್ಗೆ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಇದನ್ನು ಆಧರಿಸಿ ತನಿಖೆಗೆ ಸಿಎಂ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read