HomeLatest News'ಇನ್ವೆಸ್ಟ್ ಕರ್ನಾಟಕ' ಸಮಾವೇಶದಲ್ಲಿ 6.23 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದ: 2.20 ಲಕ್ಷ ಉದ್ಯೋಗ...

‘ಇನ್ವೆಸ್ಟ್ ಕರ್ನಾಟಕ’ ಸಮಾವೇಶದಲ್ಲಿ 6.23 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದ: 2.20 ಲಕ್ಷ ಉದ್ಯೋಗ ಸೃಷ್ಟಿ

ಬೆಂಗಳೂರು: ‘ಇನ್ವೆಸ್ಟ್ ಕರ್ನಾಟಕ 2025’ರ ಸಮಾವೇಶದಲ್ಲಿ 98 ಕಂಪನಿಗಳೊಂದಿಗೆ 6,23,970 ಕೋಟಿ ರೂ. ಹೂಡಿಕೆ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ. ಇದರಿಂದ 2.20 ಲಕ್ಷ ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ದ ನ ಉಮಾಶ್ರೀ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಒತ್ತು ನೀಡಲು ಮತ್ತು ಕೈಗಾರಿಕಾ ಸ್ನೇಹ ವಾತಾವರಣ ಸೃಷ್ಟಿಸಲು ಏಕಗವಾಕ್ಷಿ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದೆ. ಇತರೆ ಸಂಬಂಧಿತ ಇಲಾಖೆಗಳ ಸೇವೆಗಳನ್ನು ಕೂಡ ಸಂಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹೂಡಿಕೆಗಳನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಡಿಜಿಟಲ್ ಪ್ರಥಮ ವಿಧಾನ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ 100.69 ಕೋಟಿ ರೂಪಾಯಿ ವೆಚ್ಚವಾಗಿದೆ. 2022ರ ಸಮಾವೇಶದಲ್ಲಿ 57 ಕಂಪನಿಗಳೊಂದಿಗೆ 5,41,369 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular