HomeKarnatakaGOOD NEWS : ಕರ್ನಾಟಕದಲ್ಲಿ ಜಪಾನಿನ 150ಕ್ಕೂ ಹೆಚ್ಚು ಕಂಪನಿಗಳಿಂದ ಹೂಡಿಕೆ ; ಹಲವು...

GOOD NEWS : ಕರ್ನಾಟಕದಲ್ಲಿ ಜಪಾನಿನ 150ಕ್ಕೂ ಹೆಚ್ಚು ಕಂಪನಿಗಳಿಂದ ಹೂಡಿಕೆ ; ಹಲವು ಉದ್ಯೋಗವಕಾಶ ಸೃಷ್ಟಿ

ಬೆಂಗಳೂರು : ಜಪಾನಿನ 150ಕ್ಕೂ ಹೆಚ್ಚು ಕಂಪನಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲಿದ್ದು, ಈ ಮೂಲಕ ಹಲವು ಉದ್ಯೋಗವಕಾಶ ಸೃಷ್ಟಿಯಾಗುವ ನಿರೀಕ್ಷೆಯಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಂಬಿ ಪಾಟೀಲ್ ಜಪಾನಿನ 150ಕ್ಕೂ ಹೆಚ್ಚು ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಸಮ್ಮತಿ ಸೂಚಿಸಿದೆ.

ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನೇತೃತ್ವದ ಕರ್ನಾಟಕ ಸರ್ಕಾರದ ಉನ್ನತ ಮಟ್ಟದ ನಿಯೋಗ ಜಪಾನ್ನಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಕೆಲ ಕಂಪನಿಗಳು ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದ ಮೂಲಕ ಭಾರತದಲ್ಲಿ ತಮ್ಮ ಪ್ರಯಾಣವನ್ನು ಆರಂಭಿಸಲಿದೆ ರೆನೆಸಸ್ : ಎಂಬಿ ಪಾಟೀಲ್

ಮೈಕ್ರೋ ಕಂಟ್ರೋಲರ್ ಗಳು, ಸೆಮಿಕಂಡಕ್ಟರ್ ಗಳು ಸೇರಿದಂತೆ ಎಲೆಕ್ಟ್ರಾನಿಕ್ ಪರಿಕರಗಳ ಉತ್ಪಾದನೆಯಲ್ಲಿ ಹೆಸರುವಾಸಿಯಾಗಿರುವ ರೆನೆಸಸ್ – #Renesas ಕಂಪೆನಿಯ ಉಪಾಧ್ಯಕ್ಷರಾದ  ಚಾರ್ಲ್ಸ್ ಕವಾಶಿಮ ಹಾಗೂ ಹಿರಿಯ ನಿರ್ದೇಶಕರಾದ  ತೋಷಿಹಿಕೊ ಇಗರಶಿ ಅವರೊಂದಿಗೆ  ನಡೆಸಿದ ಮಾತುಕತೆ ಯಶಸ್ವಿಯಾಗಿದೆ.

ಬೆಂಗಳೂರಿನಲ್ಲಿ ಸಂಶಧೋನೆ ಮತ್ತು ಅಭಿವೃದ್ಧಿ (R&D) ಕೇಂದ್ರ ಸ್ಥಾಪಿಸುವುದು ಮತ್ತು ಕರ್ನಾಟಕದಲ್ಲಿ ಹೆಚ್ಚಿನ ಅವಕಾಶಗಳನ್ನು ಅನ್ವೇಷಿಸುವುದು ಸೇರಿದಂತೆ ಮುಂದಿನ ದಿನಗಳಲ್ಲಿ ದೊಡ್ಡ ಯೋಜನೆಗಳೊಂದಿಗೆ Renesas ನಮ್ಮ ರಾಜ್ಯದ ಮೂಲಕ ಭಾರತದಲ್ಲಿ ತಮ್ಮ ಪ್ರಯಾಣವನ್ನು ಆರಂಭಿಸಲಿದೆ! ಮುಂಬರುವ GIM2025, ಇನ್ವೆಸ್ಟ್ ಕರ್ನಾಟಕಕ್ಕೆ ನಾವು ಅವರನ್ನು ಆಹ್ವಾನಿಸಿದ್ದೇವೆ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular