HomeKarnatakaಆಮಂತ್ರಣ ಪತ್ರಿಕೆ ಕೊಡಲು ಹೋಗಿದ್ದ ಮದುಮಗ ಅಪಘಾತದಲ್ಲಿ ಸಾವು; ಮುಗಿಲು ಮುಟ್ಟಿದ ಆಕ್ರಂದನ

ಆಮಂತ್ರಣ ಪತ್ರಿಕೆ ಕೊಡಲು ಹೋಗಿದ್ದ ಮದುಮಗ ಅಪಘಾತದಲ್ಲಿ ಸಾವು; ಮುಗಿಲು ಮುಟ್ಟಿದ ಆಕ್ರಂದನ

ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಮದುವೆ ಆಮಂತ್ರಣ ಕೊಡಲು ಹೋಗಿದ್ದ ಮದುಮಗ ಮೃತಪಟ್ಟಿದ್ದಾರೆ. ಬೈಕ್ ಸವಾರ ಮಂಜುನಾಥ(30) ಮೃತಪಟ್ಟವರು ಎಂದು ಹೇಳಲಾಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿ ಘಟನೆ ನಡೆದಿದೆ. ಫೆಬ್ರವರಿ 12ರಂದು ಮಂಜುನಾಥ್ ಮದುವೆ ನಿಶ್ಚಯವಾಗಿತ್ತು. ನಾಯಕನಹಟ್ಟಿಯಿಂದ ಕಾಟಪ್ಪನಹಟ್ಟಿಗೆ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಮದುವೆ ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular