ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕಂಪ್ಲಿ ಪುರಸಭೆ ವತಿಯಿಂದ 2025-26ನೇ ಸಾಲಿನ ಎಸ್.ಎಫ್.ಸಿ ಶೇ.7.25 (ಇತರೆ ಹಿಂದುಳಿದವರ ಕಲ್ಯಾಣಕ್ಕಾಗಿ) ಹಾಗೂ ಶೇ.5 (ವಿಕಲಚೇತನರ)ರ ವೈಯಕ್ತಿಕ ಸೌಲಭ್ಯದಡಿ ವಿವಿಧ ಯೋಜನೆಗಳಡಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಕಂಪ್ಲಿ ಪಟ್ಟಣದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಸಮುದಾಯದವರು ಮತ್ತು ವಿಕಚೇತನರು ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ನೆರವು ನೀಡಲಾಗುವುದು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ.

*ಬೇಕಾದ ದಾಖಲೆ

ನಿಗದಿತ ಅರ್ಜಿ ನಮೂನೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಐ.ಡಿ ಕಾರ್ಡ್, 3 ಭಾವಚಿತ್ರ, ಪ್ರಸಕ್ತ ಸಾಲಿನ ವಿದ್ಯಾಭ್ಯಾಸದ ಪ್ರಮಾಣ ಪತ್ರ, ಹಿಂದುಳಿದ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಸೌಲಭ್ಯ ಪಡೆಯದೇ ಇರುವ ಬಗ್ಗೆ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆ ಕಚೇರಿಗೆ ಭೇಟಿ ನೀಡಬಹುದು ಎಂದು ಕಂಪ್ಲಿ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read