2024ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

ಶಿವಮೊಗ್ಗ : ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ ದಿನಾಂಕ:01.01.2024 ರಿಂದ 31.12.2024ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಪದ್ಯ ಹಾಗೂ ಜನಪದ ಸಂಕೀರ್ಣ ಎಂಬ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಲೇಖಕರು/ ಪ್ರಕಾಶಕರು/ ಸಂಪಾದಕರುಗಳು ತಮ್ಮ 1 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಮೇ 20 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟಾçರ್ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು.ವಿ.ಸೂ – ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು / ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದಾಗಿ ಕೋರಿದೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-22215509 ನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read