2025-26 ನೇ ಸಾಲಿಗೆ ಯಶಸ್ವಿನಿ ರಕ್ಷಣಾ ಯೋಜನೆಯನ್ನು ಸಹಕಾರಿಗಳಿಗಾಗಿ ಮರು ಜಾರಿಗೊಳಿಸಿದ್ದು, ಈ ಯೋಜನೆಯಡಿ ಹೊಸ ಸದಸ್ಯರು ನೋಂದಾಯಿಸಿಕೊಳ್ಳಬಹುದು ಎಂದು ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.
ನೋಂದಣಿಗೆ ಮಾ.31 ಕೊನೆ ದಿನವಾಗಿದ್ದು, ಸರ್ಕಾರದ ಮಾರ್ಗಸೂಚಿಗಳನ್ವಯ ಜಾರಿಯಲ್ಲಿರುತ್ತದೆ. ಹಾಗಾಗಿ ಯಶಸ್ವಿನಿ ಯೊಜನೆಯ ಸೌಲಭ್ಯವನ್ನು ಜಿಲ್ಲೆಯ ಎಲ್ಲಾ ಸಹಕಾರಿಗಳು ಸದುಪಯೋಗ ಪಡೆದುಕೊಳ್ಳಬೇಕು.
ತಾಲ್ಲೂಕುವಾರು ಸಹಕಾರ ಅಭಿವೃದ್ಧಿ ಅಧಿಕಾರಿ
ಮಾಹಿತಿಗಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಬಳ್ಳಾರಿ: 7353457313, ಸಹಕಾರ ಅಭಿವೃದ್ದಿ ಅಧಿಕಾರಿ ಸಿರುಗುಪ್ಪ: 9449984818, ಸಹಕಾರ ಅಭಿವೃದ್ಧಿ ಅಧಿಕಾರಿ ಸಂಡೂರು: 9483633225, ಸಹಕಾರ ಅಭಿವೃದ್ಧಿ ಅಧಿಕಾರಿ ಕುರುಗೋಡು: 8073013396, ಸಹಕಾರ ಅಭಿವೃದ್ಧಿ ಅಧಿಕಾರಿ ಕಂಪ್ಲಿ: 9110412232.
ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯ, ಜನತಾ ಬಜಾರ್ ಕಟ್ಟಡ, ರೈಲ್ವೇ ಸ್ಟೇಷನ್ ರಸ್ತೆ, ಬಳ್ಳಾರಿ ಅಥವಾ ದೂ.08392-272635 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

