ಆಕ್ಷೇಪಣೆ ಹಿನ್ನೆಲೆ ವಕೀಲರ ಸಮಾವೇಶ ಆಹ್ವಾನ ಪತ್ರಿಕೆಯಲ್ಲಿ ಡಿಕೆಶಿ ಹೆಸರಿಗೆ ಕೊಕ್

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಮೈಸೂರಿನಲ್ಲಿ ಆಗಸ್ಟ್ 12 ರಂದು ಆಯೋಜಿಸಿರುವ ರಾಜ್ಯಮಟ್ಟದ ಸಮಾವೇಶದ ಆಹ್ವಾನ ಪತ್ರಿಕೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರನ್ನು ಕೈ ಬಿಡಲಾಗಿದೆ.

ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಖ್ಯ ಅತಿಥಿ ಎಂದು ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಿತ್ತು. ಡಿ.ಕೆ. ಶಿವಕುಮಾರ್ ಹಲವು ಗಂಭೀರ ಕ್ರಿಮಿನಲ್ ಪ್ರಕರಣಗಳ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ. ಅವರನ್ನು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳಲು ಅನುವು ಮಾಡಿ ಕೊಟ್ಟಿರುವ ಬಗ್ಗೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ, ಈ ಕುರಿತಾಗಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಮುಖೇನ ಆಕ್ಷೇಪಣೆ ಸಲ್ಲಿಸಿದ್ದರು.

ಇದು ವಿವಾದ ಸ್ವರೂಪ ಪಡೆಯುತ್ತಿದ್ದಂತೆ ಅವರ ರಾಜ್ಯ ವಕೀಲರ ಪರಿಷತ್ ಹೊಸ ಆಹ್ವಾನ ಪತ್ರಿಕೆ ಮುದ್ರಿಸಿದ್ದು, ಅದರಲ್ಲಿ ಡಿ.ಕೆ. ಶಿವಕುಮಾರ್ ಹೆಸರನ್ನು ಕೈ ಬಿಡಲಾಗಿದೆ. ಉಳಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ. ಎಸ್. ಬೋಪಣ್ಣ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮೊದಲಾದ ಗಣ್ಯರ ಹೆಸರನ್ನು ಮುದ್ರಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read