HomeKarnatakaರಾಜ್ಯ ಮಟ್ಟದ 'ದಸರಾ ಕಲಾ ಪ್ರದರ್ಶನ'ಕ್ಕೆ ಕಲಾಕೃತಿಗಳ ಆಹ್ವಾನ : ವಿಶೇಷ ಬಹುಮಾನವೂ ಇದೆ..!

ರಾಜ್ಯ ಮಟ್ಟದ ‘ದಸರಾ ಕಲಾ ಪ್ರದರ್ಶನ’ಕ್ಕೆ ಕಲಾಕೃತಿಗಳ ಆಹ್ವಾನ : ವಿಶೇಷ ಬಹುಮಾನವೂ ಇದೆ..!

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ – 2024ರಲ್ಲಿ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯ ಆವರಣದಲ್ಲಿ 04-10-2024 ರಿಂದ 07-10-2024 ರವರೆಗೆ ನಡೆಯುವ ರಾಜ್ಯ ಮಟ್ಟದ ದಸರಾ ಕಲಾ ಪ್ರದರ್ಶನಕ್ಕೆ ಕಲಾಕೃತಿಗಳನ್ನು ಆಹ್ವಾನಿಸಲಾಗಿದೆ.

ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ, ಛಾಯಚಿತ್ರ, ಅನ್ವಯ ಕಲೆ ವಿಭಾಗಗಳಲ್ಲಿ ವೃತ್ತಿಪರ ಹಾಗೂ ಹವ್ಯಾಸಿ ವಿಭಾಗಗಳಿರುತ್ತದೆ. ಸಾಂಪ್ರದಾಯಿಕ ಚಿತ್ರಕಲೆ, ಸಾಂಪ್ರದಾಯಿಕ ಶಿಲ್ಪಕಲೆ, ಕರಕುಶಲ ಕಲೆ / ಇನ್ಲೇ ವಿಭಾಗಗಳಲ್ಲಿ ಹವ್ಯಾಸಿ ವಿಭಾಗವಿರುವುದಿಲ್ಲ. ಎಲ್ಲಾ ವಿಭಾಗಗಳಲ್ಲಿ ಅತ್ಯುತ್ತಮ ಮೂರು ಕಲಾಕೃತಿಗಳಿಗೆ ಬಹುಮಾನಗಳನ್ನು ನೀಡಲಾಗುವುದು.

ಕಲಾಕೃತಿಗಳನ್ನು 30-09-2024 ರೊಳಗೆ ಬೆಳಗ್ಗೆ 10:30ರಿಂದ ಸಂಜೆ 5:30ರವರೆಗೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) , ಸಿದ್ಧಾರ್ಥನಗರ, ಮೈಸೂರು – 570011, ಸಂಸ್ಥೆಯ ಕಛೇರಿ ಅವಧಿಯಲ್ಲಿ ಸಲ್ಲಿಸುವುದು. ಕಲಾಕೃತಿಗಳನ್ನು ಸಲ್ಲಿಸುವ ಕಲಾವಿದರು ಸಂಪೂರ್ಣ ವಿವರವನ್ನು ಸ್ವಯಂ ದೃಢೀಕರಣದೊಂದಿಗೆ ಉಪಸಮಿತಿಗೆ ತಲುಪಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular