ಧಾರವಾಡ : ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ ಜನವರಿ 1, 2024 ರಿಂದ ಡಿಸೆಂಬರ್ 31, 2024 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಪ್ರಕಾರಗಳ ಕುರಿತು ಅತ್ಯುತ್ತಮ ಜಾನಪದ ಕೃತಿಗಳಿಗೆ ಪುಸ್ತಕ ಬಹುಮಾನ ಯೋಜನೆಯಡಿಯಲ್ಲಿ ಆಯ್ಕೆ ಮಾಡಲು ಜಾನಪದ ಕೃತಿಗಳನ್ನು ಅರ್ಜಿಯೊಂದಿಗೆ ಆಹ್ವಾನಿಸಲಾಗಿದೆ.
ಆಸಕ್ತ ಲೇಖಕರು, ಪ್ರಕಾಶಕರು ಅಥವಾ ಸಂಪಾದಕರು ತಮ್ಮ ಒಂದು ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ ಬೆಂಗಳೂರು-560002 ಗೆ ಮೇ 5, 2025 ರೊಳಗಾಗಿ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಸಲ್ಲಿಸಬೇಕೆಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:ಪುಸ್ತಕ ಬಹುಮಾನ